ಹೊಸದಿಲ್ಲಿ: ‘ರಾಮಮಂದಿರಕ್ಕೆ ಭೂಮಿಪೂಜೆ ನೆರವೇರುತ್ತಿರುವುದು ಒಂದು ಐತಿಹಾಸಿಕ ಹಾಗೂ ಭಾವನಾತ್ಮಕ ಕ್ಷಣ. ಇಷ್ಟು ವರ್ಷಗಳ ಕಾಯುವಿಕೆಯು ಕೊನೆಗೂ ಸಾರ್ಥಕವಾಯಿತು.’ ಎಂದೂ ಬಿಜೆಪಿ ಹಿರಿಯ ಮುತ್ಸದ್ಧಿ, ರಾಮಜನ್ಮಭೂಮಿ ಚಳವಳಿಯ ನೇತೃತ್ವ ವಹಿಸಿದ್ದ ಎಲ್.ಕೆ.ಆಡ್ವಾಣಿ ಹೇಳಿದ್ದಾರೆ.
ಭೂಮಿಪೂಜೆ ಹಿನ್ನೆಲೆಯಲ್ಲಿ ಮಂಗಳವಾರ ಈ ಹೇಳಿಕೆ ನೀಡಿರುವ 92 ವರ್ಷ ವಯಸ್ಸಿನ ಆಡ್ವಾಣಿ, “ಇದು ಕೇವಲ ನನಗೆ ಮಾತ್ರವಲ್ಲ, ಎಲ್ಲ ಭಾರತೀಯರಿಗೂ ಐತಿಹಾಸಿಕ ಮತ್ತು ಭಾವನಾತ್ಮಕ ದಿನವಾಗಿದೆ. ರಾಮಜನ್ಮಭೂಮಿ ಚಳವಳಿಯ ಸಮಯದಲ್ಲಿ ವಿಧಿಯು ನನಗೆ ಸೋಮನಾಥದಿಂದ ಅಯೋಧ್ಯೆಯವರೆಗೆ ರಾಮ ರಥಯಾತ್ರೆಯ ರೂಪದಲ್ಲಿ ಪವಿತ್ರ ಕಾರ್ಯವೊಂದನ್ನು ನೆರವೇರಿಸಲು ಅವಕಾಶ ಕಲ್ಪಿಸಿತು. ಅಂದಿನ ಯಾತ್ರೆಯು ಅಪರಿಮಿತ ಭಕ್ತಾದಿಗಳ ಆಕಾಂಕ್ಷೆ, ಶಕ್ತಿ ಹಾಗೂ ಉತ್ಸಾಹವನ್ನು ತೋರಿಸಿತು’ ಎಂದಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಭವ್ಯ ಮಂದಿರ ನಿರ್ಮಾಣವಾಗಬೇಕು ಎನ್ನುವುದು ಬಿಜೆಪಿಯ ಧ್ಯೇಯವಾಗಿತ್ತು. ಇಂದಿನ ಈ ಶುಭಸಂದರ್ಭದಲ್ಲಿ ನಾನು, ರಾಮಜನ್ಮಭೂಮಿ ಚಳವಳಿಗೆ ಮೌಲ್ಯಯುತ ಕೊಡುಗೆಗಳನ್ನು ನೀಡಿದ, ತ್ಯಾಗಗಳನ್ನು ಮಾಡಿದ ಸಂತರು, ನಾಯಕರು ಹಾಗೂ ದೇಶ-ವಿದೇಶಗಳಲ್ಲಿನ ಜನರಿಗೆ ನಾನು ಧನ್ಯವಾದ ಹೇಳಬಯಸುತ್ತೇನೆ ಎಂದೂ ಆಡ್ವಾಣಿ ಹೇಳಿದ್ದಾರೆ.
ಶ್ರೀರಾಮ ಮಂದಿರವು ಭಾರತವನ್ನು ಒಂದು ಬಲಿಷ್ಠ, ಸಮೃದ್ಧ, ಶಾಂತಿಯುತ ಹಾಗೂ ಸಾಮರಸ್ಯಭರಿತ ದೇಶವನ್ನಾಗಿ ಪ್ರತಿನಿಧಿಸಲಿದೆ ಮತ್ತು ಎಲ್ಲರಿಗೂ ನ್ಯಾಯ ಒದಗಿಸುವ, ಯಾರನ್ನೂ ಹೊರಗಿಡದ ರಾಮರಾಜ್ಯವು ಸೃಷ್ಟಿಯಾಗಲಿದೆ ಎನ್ನುವ ವಿಶ್ವಾಸ ನನಗಿದೆ ಎಂದೂ ಆಡ್ವಾಣಿ ಅವರು ನುಡಿದಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…