ಉಡುಪಿ :ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಆಗಸ್ಟ್ 5 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಂದ ಶಿಲಾನ್ಯಾಸ ಗೊಳ್ಳುವ ಮೂಲಕ ಸಾಕಾರವಾಗುತ್ತಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಗಳಾಗುತ್ತಿರುವುದು ನಮ್ಮೆಲ್ಲರ ಸೌಭಾಗ್ಯ ಎಂದು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಲಕ್ಷಾಂತರ ಕರಸೇವಕರ ತ್ಯಾಗ ಬಲಿದಾನದೊಂದಿಗೆ, ಶ್ರೀ ಆಟಲ್ ಬಿಹಾರಿ ವಾಜಪೇಯಿ,ಲಾಲ್ ಕೃಷ್ಣ ಅಡ್ವಾಣಿ, ಪೇಜಾವರ ಮಠದ ಶ್ರೀ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾಗಿದ್ದ ಅಶೋಕ್ ಸಿಂಘಾಲ್, ಉಮಾ ಭಾರತಿ, ಮುರಳಿ ಮನೋಹರ ಜೋಶಿ, ಮೊದಲಾದ ಹಲವಾರು ನಾಯಕರ ನೇತೃತ್ವದಲ್ಲಿ ನಡೆದ ಹೋರಾಟದ ಫಲವಾಗಿ ಭಾರತೀಯರ ಸ್ವಾಭಿಮಾನದ ಪ್ರತೀಕವಾಗಿ ರಾಮ ಮಂದಿರದ ನಿರ್ಮಾಣ ಸಾಕಾರಗೊಳ್ಳುತ್ತಿದೆ.
ನಮ್ಮ ಜೀವಿತಾವಧಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವ್ಯ ಶ್ರೀರಾಮ ಮಂದಿರದ ಶಿಲಾನ್ಯಾಸ ಸಮಾರಂಭದ ಸಂಭ್ರಮವನ್ನು ಮನೆ ಮನಗಳಲ್ಲಿ ಆಚರಿಸುವ ನಿಟ್ಟಿನಲ್ಲಿ ಪ್ರತಿ ಮನೆಯಲ್ಲಿಯೂ ಭಗವಧ್ವಜ ಹಾರಿಸಿ, ದೀಪವನ್ನು ಬೆಳಗುವ ಮೂಲಕ ಸ್ಮರಣಿಯವಾಗಿಸುವಂತೆ ಜನತೆಯಲ್ಲಿ ಮನವಿ ಮಾಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…