ಅಯೋಧ್ಯೆ: 500 ವರ್ಷಗಳ ಬಳಿಕ ಭಗವಾನ್ ರಾಮ ಸೋಮವಾರ ತನ್ನ ವಾಸಸ್ಥಾನಕ್ಕೆ ಮರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲಿ ಶಾಸ್ತ್ರೋಕ್ತವಾಗಿ ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಯಾಗಿದೆ . ಇದಾದ ಬಳಿಕ ಸಾವರ್ಜನಿಕರ ದರ್ಶನಕ್ಕೆ ಅನುಮತಿ ನೀಡಲಾಯಿತು.
ಸಾರ್ವಜನಿಕರಿಗೆ ರಾಮಮಂದಿರದಲ್ಲಿ ಬಾಲರಾಮನ ದರ್ಶನಕ್ಕೆ ಅವಕಾಶ ನೀಡುತ್ತಿದ್ದಂತೆಯೇ ಭಕ್ತರ ದಂಡೇ ಹರಿದು ಬರಲಾರಂಭಿಸಿದೆ. ಸೋಮವಾರ ರಾತ್ರಿಯಿಂದಲೇ ಅಯೋಧ್ಯಾಧಾಮದಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. ಅಲ್ಲದೇ ತೀವ್ರ ಚಳಿಯನ್ನೂ ಲೆಕ್ಕಿಸದೇ ದೇವಸ್ಥಾನದ ಹೊರಗಡೆಯೂ ಸಾವಿರಾರು ಜನ ಜಮಾಯಿಸತೊಡಗಿದರು.
ತಡರಾತ್ರಿಯಿಂದಲೇ ರಾಮ ಮಂದಿರದ ಮುಖ್ಯ ದ್ವಾರದ ಹೊರಗೆ ಭಕ್ತಾದಿಗಳ ಉದ್ದನೆಯ ಸಾಲು ಆರಂಭವಾಗಿತ್ತು. ಬೆಳಗ್ಗಿನ ಜಾವ 2 ಗಂಟೆಯಿಂದಲೇ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಲಾರಂಭಿಸಿದರು. ನೆರೆದಿದ್ದ ಜನರು ದ್ವಾರದ ಮುಂದೆ ʼಜೈ ಶ್ರೀ ರಾಮ್ʼ ಎಂದು ಘೋಷಣೆ ಕೂಗುತ್ತಾ ದೇಗುಲದೊಳಗೆ ಪ್ರವೇಶಿಸುತ್ತಿದ್ದಾರೆ. ದೇಶಾದ್ಯಂತ ಭಕ್ತರನ್ನು ಒಟ್ಟುಗೂಡಿಸುವ ಪ್ರಕ್ರಿಯೆ ಮುಂದುವರಿದಿದೆ. ಜೊತೆಗೆ ಅಯೋಧ್ಯೆಯ ಸ್ಥಳೀಯ ನಿವಾಸಿಗಳು ಕೂಡ ಬಾಲರಾಮನ ದರ್ಶನ ಮತ್ತು ಪೂಜೆಗಾಗಿ ಆಗಮಿಸುತ್ತಿದ್ದಾರೆ. ರಾಮಪಥದಲ್ಲಿ ಕಾಲಿಡಕ್ಕೂ ಜಾಗವಿಲ್ಲದಷ್ಟು ಭಕ್ತರು ನೆರೆದಿದ್ದಾರೆ. ಕ್ಷಣಕ್ಷಣಕ್ಕೂ ಭಕ್ತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ವ್ಯವಸ್ಥೆ ಕೂಡ ಮಾಡಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…