Featured

ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – vishwanews24

ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದರು.

ಮೋದಿ ಅವರು 22 ಅಡಿ ಎತ್ತರದ ಕೇಸರಿ ಧ್ವಜವನ್ನು ಹಾರಿಸಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿದರು. ಪ್ರಧಾನಿಗೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಾಥ್‌ ನೀಡಿದರು.

ಧ್ವಜಾರೋಹಣ ಸಮಾರಂಭಕ್ಕೂ ಮುನ್ನ ಪ್ರಧಾನಿ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ರಾಮ ದರ್ಬಾರ್‌ನಲ್ಲಿ ಪ್ರಾರ್ಥನೆ ಸಲ್ಲಿಸಿದರು. ಗರ್ಭಗುಡಿಯಲ್ಲಿ ಆರತಿ ಬೆಳಗಿದರು. ರಾಮಲಲ್ಲಾನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಧ್ವಜದ ವಿಶೇಷತೆಗಳೇನು ?
* ರಾಮಮಂದಿರದ ಮೇಲೆ ಹಾರಾಡುತ್ತಿರುವ ಧ್ವಜ ತುಂಬಾ ವಿಶೇಷವಾಗಿದ್ದು, ದೈವಿಕ ಧ್ವಜವನ್ನು ಗುಜರಾತ್‌ನ ಅಹಮದಾಬಾದ್‌ನಲ್ಲಿ ತಯಾರಿಸಲಾಗಿದೆ.
* ಅಯೋಧ್ಯೆ ರಾಮ ಮಂದಿರದ ಧಾರ್ಮಿಕ ಧ್ವಜದಲ್ಲಿರುವ ಚಿಹ್ನೆಗಳಿಗೆ ಪ್ರತಿಯೊಂದಕ್ಕೂ ವಿಶೇಷ ಅರ್ಥವಿದೆ. ಕೇಸರಿ ಬಣ್ಣದ ಧ್ವಜ, ಸೂರ್ಯ ದೇವರು ಮತ್ತು ಓಂ ಚಿಹ್ನೆ ಹೊಂದಿದೆ.
* ಧಾರ್ಮಿಕ ಮಹತ್ವವುಳ್ಳ ವಿಶಿಷ್ಟವಾದ ಮರದ ಚಿತ್ರವನ್ನು ಸಹ ಧ್ವಜದ ಮೇಲೆ ಚಿತ್ರಿಸಲಾಗಿದೆ.
* ತಯಾರಿಸಲು 25 ದಿನಗಳು ಬೇಕಾಯಿತು. ಮೂರು ಪದರಗಳ ಬಟ್ಟೆಯಿಂದ ತಯಾರಿಸಲಾಗಿದೆ. ಇದರಲ್ಲಿ ಬಳಸಲಾದ ಪ್ರತಿಯೊಂದು ಅಂಶವೂ ಸ್ಥಳೀಯವಾಗಿದೆ.
* ಅಂಚುಗಳನ್ನು ಗೋಲ್ಡನ್ ರೇಷ್ಮೆಯಿಂದ ಮಾಡಲಾಗಿದ್ದು, ಎಲ್ಲಾ ಚಿಹ್ನೆಗಳು ಕೈಯಿಂದ ಮಾಡಲಾಗಿದೆ. ಅವೆಲ್ಲವನ್ನೂ ಕೈಯಿಂದ ರಚಿಸಲು 7-8 ದಿನಗಳು ಬೇಕಾಯಿತು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago