ಲಖನೌ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸರಯೂ ನದಿಯ ದಂಡೆಯಲ್ಲಿರುವ ಘಾಟ್‌ಗಳ ಸರಣಿ ರಾಮ್ ಕಿ ಪೈಡಿಯಲ್ಲಿ ಸ್ನಾನ ಮಾಡುವಾಗ ಸಾರ್ವಜನಿಕವಾಗಿ ಪತ್ನಿಗೆ ಮುತ್ತಿಟ್ಟ ವ್ಯಕ್ತಿಯನ್ನು ಪಕ್ಕದಲ್ಲೇ ಇದ್ದ ಜನರ ಗುಂಪು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತಮ್ಮ ಸುತ್ತಮುತ್ತ ಜನರಿದ್ದರು ಘಾಟ್ನಲ್ಲಿ ಸ್ನಾನ ಮಾಡುತ್ತಿದ್ದ ದಂಪತಿ ಪರಸ್ಪರ ಚುಂಬಿಸುವುದನ್ನು ನೋಡಿದ ವ್ಯಕ್ತಿಯೊಬ್ಬ ಮಹಿಳೆಯ ಗಂಡನನ್ನು ಎಳೆದುಕೊಂಡು ಹೊಡೆಯಲು ಆರಂಭಿಸುತ್ತಾನೆ. ಈ ವೇಳೆ ಅಲ್ಲಿದ್ದ ಜನರೆಲ್ಲ ಸೇರಿ ಆತನ ಮೇಲೆ ಹಲ್ಲೆ ಮಾಡುವಾಗ ತನ್ನ ಗಂಡನ ಮೇಲೆ ಹಲ್ಲೆ ಮಾಡದಂತೆ ಪತ್ನಿ ತಡೆಯಲು ಯತ್ನಿಸುತ್ತಾಳೆ. ಇಬ್ಬರನ್ನು ನೀರಿನಿಂದ ಹೊರಗೆಳೆದು ಮಹಿಳೆಯ ಗಂಡನನ್ನು ಸುತ್ತುವರಿದು ಹಲ್ಲೆ ಮಾಡುತ್ತಾರೆ. ಇದಿಷ್ಟನ್ನು ವಿಡಿಯೋ ರೆಕಾರ್ಡ್ ಮಾಡಲಾಗಿದೆ.
ವಿಡಿಯೋವನ್ನು ಅಶೋಕ್ ಸ್ವೈನ್ ಎಂಬುವರು ಶೇರ್ ಮಾಡಿಕೊಂಡಿದ್ದಾರೆ. ಈ ವ್ಯಕ್ತಿ ತನ್ನ ಹೆಂಡತಿಗೆ ಮುತ್ತು ನೀಡಿ ತಪ್ಪು ಮಾಡಿಬಿಟ್ಟ. ಅಯೋಧ್ಯೆಯಲ್ಲಿರುವ ರಾಮಭಕ್ತರು ಹಲ್ಲೆಗೊಳಗಾದ ವ್ಯಕ್ತಿಜಯ ಪತ್ನಿಯ ಜತೆ ಅಸಭ್ಯವಾಗಿ ವರ್ತಿಸಿ, ವ್ಯಕ್ತಿಯನ್ನು ಥಳಿಸಿದ್ದಾರೆ, ಮುತ್ತಿಡುವುದು ಭಾರತೀಯ ಸಂಸ್ಕೃತಿಯಲ್ಲವಂತೆ. ಆದರೆ, ಗುಂಪು ಹಲ್ಲೆ ಸಂಸ್ಕೃತಿಯಲ್ಲಿ ಒಂದಂತೆ ಎಂದು ಅಶೋಕ್ ಸ್ವೈನ್ ಎಂಬುವರು ಟೀಕಿಸಿದ್ದಾರೆ.
ಈ ಘಟನೆಯ ಬಗ್ಗೆ ಮಾತನಾಡಿರುವ ಅಯೋಧ್ಯೆಯ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಶೈಲೇಶ್ ಪಾಂಡೆ, ಈ ವಿಡಿಯೋ ಒಂದು ವಾರ ಹಳೆಯದಾಗಿದೆ ಮತ್ತು ಈ ವಿಷಯದಲ್ಲಿ ನಮಗೆ ಯಾವುದೇ ದೂರು ಬಂದಿಲ್ಲ ಎಂದು ಹೇಳಿದ್ದಾರೆ. ಪೊಲೀಸರು ಈಗ ದಂಪತಿಗಳು ಎಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಕ್ರಮ ತೆಗೆದುಕೊಳ್ಳಲು ಬಯಸಿದರೆ ಅವರು ದೂರು ದಾಖಲಿಸಬಹುದು ಎಂದಿದ್ದಾರೆ
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…