ಮಂಗಳೂರು:ಅಯೋಧ್ಯೆ ವಿವಾದಕ್ಕೆ ಸುಪ್ರೀಂಕೋರ್ಟ್, ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂ ನ ಸಂವಿಧಾನಿಕ ಪಂಚಪೀಠವೂ ಸಿಜೆಐ ಗೋಗೊಯಿ, ಜಸ್ಟೀಸ್ ಎಸ್ ಎ ಬೋಬ್ಡೆ, ಜಸ್ಟೀಸ್ ಡಿವೈ ಚಂದ್ರಚೂಡ್, ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ಜಸ್ಟೀಸ್ ಅಬ್ದುಲ್ ನಝೀರ್ ಸದಸ್ಯರನ್ನು ಒಳಗೊಂಡಿದೆ.
ಪಂಚಪೀಠದ ಸದಸ್ಯರಲ್ಲಿ ಒಬ್ಬರಾಗಿರುವ ನ್ಯಾ. ಅಬ್ದುಲ್ ನಜೀರ್ ಕರಾವಳಿಯವರು. ನ್ಯಾಯಮೂರ್ತಿ ಅಬ್ದುಲ್ ನಜೀರ್ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಸಮೀಪದ ಬೆಳುವಾಯಿ ಗ್ರಾಮದವರು.
ಜ. 5, 1958ರ ಜನವರಿ ಐದರಂದು ಜನಿಸಿದ ಎಸ್ ಎ ನಜೀರ್ ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದರು. ನಂತರ ಮಂಗಳೂರಿನ ಎಸ್ ಡಿಎಂ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ಧಾರೆ.
1983ರಲ್ಲಿ ಅಬ್ದುಲ್ ನಜೀರ್ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ಅಭ್ಯಾಸ ಆರಂಭಿಸಿದರು.
2003ರಲ್ಲಿ ಹೈಕೋರ್ಟ್ ನ ಜಡ್ಜಾಗಿ ಆಯ್ಕೆಯಾದ ಇವರು 2017ರಲ್ಲಿ ಸುಪ್ರೀಂ ಕೋರ್ಟ್ ಜಡ್ಜ್ ಆಗಿ ನೇಮಕವಾಗಿದ್ದರು. ಐತಿಹಾಸಿಕ ತ್ರಿವಳಿ ತಲಾಖ್ ಪ್ರಕರಣದ ಪಂಚ ಸದಸ್ಯ ಪೀಠದ ಏಕಮಾತ್ರ ಮುಸ್ಲಿಂ ನ್ಯಾಯಾಧೀಶರಾಗಿದ್ದರು.
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…
ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ…
ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…