Featured

ಅಯೋಧ್ಯೆ ತೀರ್ಪು ಹಿಂದೂಗಳ ಪರ ತೀರ್ಪು ಬಂದ್ರೆ ವಿಜಯೋತ್ಸವ ಬೇಡ , ತೀರ್ಪನ್ನು ಹಿಂದೂ – ಮುಸ್ಲಿಂರು ಸಮಾನವಾಗಿ ಸ್ವೀಕರಿಸಿ : ಪೇಜಾವರ ಶ್ರೀ -Vishwanews24

ಉಡುಪಿ: ಅಯೋಧ್ಯೆಯ ಕುರಿತು ಬರಲಿರುವ ತೀರ್ಪು ಹಿಂದೂಗಳ ಪರವಾಗಿ ಬಂದಲ್ಲಿ ವಿಜಯೋತ್ಸವ ಮಾಡದೇ ವಿರೋಧವಾಗಿ ಬಂದಲ್ಲಿ ಪ್ರತಿಭಟನೆಗಿಳಿಯದೆ ಶಾಂತವಾಗಿ ಸ್ವೀಕರಿಸುವಂತೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಯವರು ಜನರಿಗೆ ಮನವಿ ಮಾಡಿದ್ದಾರೆ.

ಅವರು ಗುರುವಾರ ಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸದ್ಯವೇ ಅಯೋಧ್ಯೇಯ ತೀರ್ಪು ಹೊರಬರಲಿದ್ದು ಹಿಂದೂಗಳ ಪರ ತೀರ್ಪು ಬಂದ್ರೆ ವಿಜಯೋತ್ಸವ ಬೇಡ ಅಲ್ಲದೆ ಯಾವುದೇ ರೀತಿಯಲ್ಲಿ ಬೀದಿಗಿಳಿದು ಮೆರವಣಿಗೆ ಮಾಡಬಾರದು. ತೀರ್ಪನ್ನು ಶಾಂತವಾಗಿ ಸ್ವೀಕರಿಸಬೇಕು ಮತ್ತು ದೇವಸ್ಥಾನ, ಮಠದ ಒಳಗೆ ಹರ್ಷಾಚರಣೆ ಮಾಡಿದರೆ ಸಾಕು ಎಂದು ಅವರು ಹೇಳಿದ್ದಾರೆ.

ನವೆಂಬರ್ 15ರೊಳಗೆ ತೀರ್ಪು ನೀಡುವ ಸಾಧ್ಯತೆ ಇದ್ದು ರಾಮಮಂದಿರದ ಕಡೆಗೆ ತೀರ್ಪು ಬರುತ್ತದೆ ಎಂಬ ಭಾವನೆಯಿದೆ. ಯಾಕೆಂದರೆ ಕೋರ್ಟ್‍ನ ತೀರ್ಪು ಸಂವಿಧಾನ ಬದ್ದವಾಗಿರುತ್ತದೆ. ಹೀಗಾಗಿ ಸಾರ್ವಜನಿಕರಲ್ಲಿ ನನ್ನ ಮನವಿ. ವಿಜಯೋತ್ಸವವನ್ನು ಬೇಕಾದರೆ ಭಕ್ತರು ತಮ್ಮ ಮನೆಗಳಲ್ಲಿ ಪೂಜೆ, ಭಜನೆ ಮಾಡುವ ಮೂಲಕ ಆಚರಿಸಲಿ. ಈ ಮನವಿ ಎಲ್ಲಾ ಹಿಂದು ಪರ ಸಂಘಟನೆಗಳಿಗೂ ಅನ್ವಯಿಸುತ್ತದೆ ಎಂದು ಎಚ್ಚರಿಸಿದ್ದಾರೆ

ಅದೇ ರೀತಿಯಲ್ಲಿ ಮುಸ್ಲಿಂ ಬಾಂಧವರೂ ಕೂಡಾ ತೀರ್ಪನ್ನು ಶಾಂತವಾಗಿ ಸ್ವೀಕರಿಸಬೇಕು. ಪರ ಅಥವಾ ವಿರುದ್ಧ ತೀರ್ಪು ಬಂದರೆ ಅತಿರೇಕದ ವರ್ತನೆ ಬೇಡ ಹಿಂದೂಗಳು- ಮುಸಲ್ಮಾನರು ಸಮಾನವಾಗಿ ತೀರ್ಪನ್ನು ಸ್ವೀಕರಿಸಿ ಕರ್ನಾಟಕ , ಕರಾವಳಿ ಜನ ಶಾಂತವಾಗಿರಬೇಕು ಎಂದರು.

ತೀರ್ಪು ಅನುಕೂಲವಾಗಿ ಬರುತ್ತದೆ ಎಂದು ಭಾವಿಸಿದ್ದು, ಒಂದು ವಾರದ ಒಳಗೆ ರಾಮಮಂದಿರ ತೀರ್ಪು ಬರಬಹುದು. ಸಂವಿಧಾನ, ಸುಪ್ರೀಂ ಕೋರ್ಟ್ ಗೆ ದೇಶದ ಜನ ಗೌರವ ಕೊಡಬೇಕು ಸಂಘರ್ಷ ಪ್ರತಿಭಟನೆಗೆ ಯಾರೂ ಅವಕಾಶ ಮಾಡಿಕೊಡಬಾರದು. ರವಿಶಂಕರ್ ಗುರೂಜಿ ಕೂಡಾ ಶಾಂತಿ ಕಾಪಾಡಲು ಕರೆ ಕೊಟ್ಟಿದ್ದಾರೆ ಮಂದಿರ ವಿಚಾರದಲ್ಲಿ ಅಂತರಂಗದ ಸಂಧಾನ ಆಗಿದೆ ಎಂಬ ಮಾಹಿತಿಯಿದೆ ಎಂದು ಸ್ವಾಮೀಜಿ ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago