ಉಡುಪಿ,: ಇಂದು ಬೆಳಗ್ಗೆ ಅಂತಿಮ ಅಯೋಧ್ಯೆ ತೀರ್ಪು ಪ್ರಕಟಿಸಿದ್ದು, “ವೈಯಕ್ತಿಕವಾಗಿ ಈ ತೀರ್ಪು ನನಗೆ ಸಮ್ಮತವಾಗಿದೆ. ಎಲ್ಲರೂ ಸಮಚಿತ್ತದಿಂದ ಈ ತೀರ್ಪನ್ನು ಸ್ವೀಕರಿಸಬೇಕು” ಎಂದು ತೀರ್ಪಿಗೆ ಪ್ರತಿಕ್ರಿಯಿಸಿದ್ದಾರೆ ಪೇಜಾವರ ಶ್ರೀಗಳು.
ಉಡುಪಿಯಲ್ಲಿ ಮಾತನಾಡಿದ ಪೇಜಾವರ ಶ್ರೀಗಳು, “ಸುಪ್ರಿಂ ಕೋರ್ಟಿನ ನ್ಯಾಯಪೀಠವು ವಿವಾದಿತ ಭೂಮಿ ಮಂದಿರಕ್ಕೆ, ಮಸೀದಿಗೆ ಪ್ರತ್ಯೇಕ ಜಾಗ ಹಂಚಿಕೆ ಮಾಡಿ ತೀರ್ಪು ನೀಡಿದೆ. ಎಲ್ಲರೂ ಸಮಚಿತ್ತದಿಂದ ಈ ತೀರ್ಪನ್ನು ಸ್ವೀಕರಿಸಬೇಕು. ನನಗೆ ವೈಯಕ್ತಿಕವಾಗಿ ತೀರ್ಪು ಸಮ್ಮತವಾಗಿದೆ. ಮುಸ್ಲಿಮರಿಗೂ ಐದು ಎಕರೆ ಕೊಡಬೇಕು ಎಂದು ತೀರ್ಪಿನಲ್ಲಿ ಹೇಳಿದ್ದಾರೆ. ಹಾಗಾಗಿ ಈ ತೀರ್ಪು ಸರ್ವಸಮ್ಮತವಿದೆ” ಎಂದಿದ್ದಾರೆ.
“ಹಿಂದೂಗಳಿಗೆ ಜನ್ಮಭೂಮಿಯ ಹಕ್ಕು ಮುಖ್ಯ, ಮುಸಲ್ಮಾನರಿಗೆ ಮಸೀದಿಗೆ ಜಾಗ ಮುಖ್ಯ. ಈ ತೀರ್ಪು ಹಿಂದೂ ಮುಸಲ್ಮಾನರಲ್ಲಿ ಬಾಂಧವ್ಯ ಬೆಳೆಯಲು ಉತ್ತಮ ಅವಕಾಶ ಒದಗಿಸಿಕೊಟ್ಟಿದೆ. ಹಿಂದೂ ಮುಸಲ್ಮಾನರು ಒಟ್ಟು ಸೇರಿ ಸೂಕ್ತ ಸ್ಥಳವನ್ನು ಮಸೀದಿಗೆ ಕೊಡಬೇಕು, ಮಸೀದಿ ನಿರ್ಮಾಣಕ್ಕೆ ಹಿಂದೂಗಳು ಸಹಕರಿಸಬೇಕು. ಮಂದಿರ ನಿರ್ಮಾಣ ವಿಚಾರದಲ್ಲಿ ಮುಸ್ಲಿಮರೂ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.
“ತೀರ್ಪು ಪ್ರಕಟ ವಿಚಾರದಲ್ಲಿ ವಿಜಯೋತ್ಸವ, ಮೆರವಣಿಗೆ ಬೇಡ ಎಂದು ನಿನ್ನೆಯೇ ಹೇಳಿದ್ದೆ. ಈಗಲೂ ಅದನ್ನೇ ಪುನರುಚ್ಚರಿಸುವೆ. ಹಿಂದೂಗಳು, ಮುಸಲ್ಮಾನರು ಸಮಚಿತ್ತದಿಂದ ಈ ತೀರ್ಪನ್ನು ಸ್ವೀಕರಿಸಿ. ನನ್ನ ಈ ಇಳಿ ವಯಸ್ಸಿನಲ್ಲಿ ಈ ತೀರ್ಪು ನೋಡುತ್ತೇನೆ ಎಂದು ಭಾವಿಸಿರಲಿಲ್ಲ, ವೈಯಕ್ತಿಕವಾಗಿ ಸಂತೋಷವಾಗಿದೆ” ಎಂದಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…