Featured

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ

ಉಡುಪಿ: ರಾಮ ಮಂದಿರ ದೇಣಿಗೆ ಮತ್ತು ಹುಂಡಿ ಕಳವು ಹಾಗೂ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಳಿಬರುತ್ತಿರುವ ಆರೋಪಗಳ ಕುರಿತು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಆಗ್ರಹಿಸಿದರು.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನ ಹೆಸರನ್ನು ಬಳಸಿಕೊಂಡು ಬಿಜೆಪಿ ಚುನಾವಣೆಗಳನ್ನು ಎದುರಿಸಿದ್ದು, ಮನೆ ಮನೆಗೆ ಇಟ್ಟಿಗೆ ನೀಡಿ ಪೂಜೆ ಮಾಡಿಸಿ ಮತ ಯಾಚನೆ ನಡೆಸಲಾಗಿದೆ. ರಾಮ ಮಂದಿರಕ್ಕಾಗಿ ದಶಕಗಳಿಂದ ಸಂಗ್ರಹಿಸಲಾದ ಹಣದ ಸಂಪೂರ್ಣ ಲೆಕ್ಕಪತ್ರ ಸಾರ್ವಜನಿಕರಿಗೆ ಲಭ್ಯವಿಲ್ಲ.

ಮಂದಿರ ನಿರ್ಮಾಣದ ವೇಳೆ ರಿಯಲ್ ಎಸ್ಟೇಟ್ ವ್ಯವಹಾರ ನಡೆದಿರುವ ಆರೋಪಗಳಿದ್ದು, ಟ್ರಸ್ಟ್ ಸದಸ್ಯರು ಇದಕ್ಕೆ ಉತ್ತರಿಸಬೇಕಾಗಿದೆ. ಕರ್ನಾಟಕದ ಟ್ರಯೊಬ್ಬರ ಅಳಿಯನಿಗೆ ನಿರ್ಮಾಣ ಕಾಮಗಾರಿಯಲ್ಲಿ ಅವಕಾಶ ನೀಡಲಾಗಿತ್ತು ಎಂಬ ಆರೋಪವೂ ಇದೆ ಎಂದು ಹೇಳಿದರು.

ರಾಮ ಮಂದಿರಕ್ಕೆ ಭಕ್ತರು ನೀಡಿದ ಚಿನ್ನವನ್ನು ಕರ್ನಾಟಕದಲ್ಲೇ ಕರಗಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಮಾಹಿತಿ ಹಕ್ಕಿನ ಕಾಯ್ದೆಯ ವ್ಯಾಪ್ತಿಯಿಂದ ರಾಮ ಮಂದಿರವನ್ನು ಹೊರಗಿಡಲಾಗಿದೆ ಎಂದು ದೂರಿದರು. ಸಿಸಿಟಿವಿ ಕ್ಯಾಮೆರಾಗಳನ್ನು ತೆಗೆದುಹಾಕಿರುವುದು ಹಾಗೂ ಮಂದಿರದ ಕಟ್ಟಡದ ಕೆಲವು ಭಾಗಗಳು ಹಾನಿಗೊಳಗಾಗುವ ಸ್ಥಿತಿಯಲ್ಲಿವೆ ಎಂಬ ವರದಿಗಳ ಕುರಿತು ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.
ಈ ಎಲ್ಲ ಆರೋಪಗಳ ಸತ್ಯಾಸತ್ಯತೆ ಹೊರಬರಬೇಕಾದರೆ ಎಸ್‌ಐಟಿ ತನಿಖೆ ಸಾಕಾಗುವುದಿಲ್ಲ. ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲೇ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು.ಭಕ್ತರ ಭಾವನೆಗೆ ಧಕ್ಕೆ ಉಂಟಾಗದಂತೆ ಪಾರದರ್ಶಕ ತನಿಖೆ ನಡೆಯಬೇಕು. ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ ಎಲ್ಲ ವಿಷಯಗಳ ಬಗ್ಗೆ ಮಾತನಾಡುತ್ತಾರೆ.ಆದರೆ ರಾಮಮಂದಿರ ಹಗರಣದ ಬಗ್ಗೆ ಮೌನ ವಹಿಸಿದ್ದಾರೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ಕಾಪು ಬ್ಲಾಕ್ ಕಾಂಗ್ರೆಸ್ (ದಕ್ಷಿಣ) ಸುಕುಮಾರ್ ವೈ ಉಪಸ್ಥಿತರಿದ್ದರು.

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

1 hour ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

1 hour ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

2 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

2 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

2 hours ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

2 hours ago