ನವದೆಹಲಿ : ಬಿಜೆಪಿ ಭೀಷ್ಮ ಲಾಲ್ಕೃಷ್ಣ ಅಡ್ವಾಣಿ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿಶ್ವ ಹಿಂದೂ ಪರಿಷತ್ ಈ ಹೇಳಿಕೆ ನೀಡಿದೆ.
ಅಯೋಧ್ಯೆ ಶ್ರೀರಾಮಮಂದಿರದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು ದಶಕಗಳ ಹಿಂದೆಯೇ ದೇಶದಾದ್ಯಾಂತ ರಾಮರಥ ಯಾತ್ರೆ ನಡೆಸಿ, ಸಂಚಲನ ಉಂಟು ಮಾಡಿದ್ದ ಬಿಜೆಪಿಯ ಭೀಷ್ಮ, ಉಕ್ಕಿನ ಮನುಷ್ಯ ಎಂದೇ ಖ್ಯಾತರಾದ ಲಾಲ್ಕೃಷ್ಣ ಅಡ್ವಾಣಿ ಅವರು ಜನವರಿ 22ರಂದು ನಡೆಯುವ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ತಿಳಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರಾದ ಕೃಷ್ಣ ಗೋಪಾಲ್, ರಾಮ್ ಲಾಲ್ ಹಾಗೂ ಅಲೋಕ್ ಕುಮಾರ್ ಅವರು ಅಡ್ವಾಣಿ ಅವರನ್ನು ಭೇಟಿ ಮಾಡಿ ಪ್ರತಿಷ್ಠಾಪನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, “ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಗಮಿಸುವ ಎಲ್.ಕೆ.ಅಡ್ವಾಣಿ ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯ ಮತ್ತು ಇತರ ಸೌಲಭ್ಯವನ್ನು ಒದಗಿಸಲಾಗುವುದು” ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಭವ್ಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಗಣ್ಯಾತಿಗಣ್ಯರಿಗೆ ಆಮಂತ್ರಣ ಪತ್ರಿಕೆ ನೀಡಲಾಗಿದೆ. ಇದರ ಜೊತೆಗೆ ಎಲ್ಲಾ ಸಮುದಾಯದ ಸಾಧು-ಸಂತರಿಗೂ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಲಾಗಿದೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…