ಅಯೋಧ್ಯೆ: ಭರತ ಖಂಡದಲ್ಲಿ ಮೋಕ್ಷದಾಯಕವಾದವು ಎನ್ನಲಾದ ಸಪ್ತ ಕ್ಷೇತ್ರಗಳಲ್ಲಿ ಮೊದಲನೆಯದು ಎಂದು ಪರಿಗಣಿತ ವಾಗಿರುವ ಅಯೋಧ್ಯೆಯಲ್ಲಿ ಭಾರತೀಯರ ನೂರಾರು ವರ್ಷಗಳ ಕನಸು ಇಂದು ನನಸಾಗಿದೆ. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕಾಗಿ ಪ್ರಧಾನ ಗರ್ಭಗುಡಿಯ ಶಿಲಾನ್ಯಾಸ ನಡೆದಿದೆ.
ಇದರಲ್ಲಿ ನಾವು ಭಾಗಿಯಾಗಿದ್ದು, ಈ ಅವಕಾಶ ನಮ್ಮ ಬದುಕಿನಲ್ಲಿ ಶ್ರೀರಾಮ, ಶ್ರೀಕೃಷ್ಣ ದೇವರ ಕೃಪೆಯಿಂದಾಗಿ ಲಭಿಸಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಗಳಲ್ಲಿ ಒಬ್ಬರಾಗಿರುವ ಶ್ರೀ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದ್ದಾರೆ.
ಅಯೋಧೆಯಲ್ಲಿ ಬುಧವಾರ ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು.
ಮಂದಿರ ನಿರ್ಮಾಣಕಾರ್ಯ ಸುಸೂತ್ರವಾಗಿ ನೆರವೇರಲಿ, ನಿಶ್ಚಿತ ದಿನ ಅದು ಪರಿಪೂರ್ಣವಾಗಲಿ ಎಂದು ಈ ಸಂದರ್ಭದಲ್ಲಿ ನಾವು ಶ್ರೀ ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತಿದ್ದೇವೆ ಎಂದರು.
ಮಂದಿರ ನಿರ್ಮಾಣ ಕಾರ್ಯ ಯೋಜಿಸಿದ ರೀತಿಯಲ್ಲಿ ನಡೆದು 2024ರ ಜನವರಿ ಅಂದರೆ ಮಕರ ಸಂಕ್ರಾಂತಿಯ ಬೆನ್ನಿಗೆ ಪ್ರತಿಷ್ಠಾ ಮಹೋತ್ಸವ ನಡೆಯಲಿದೆ. ಅದರಲ್ಲಿ ಭಾಗಿಯಾಗುವ, ಅದನ್ನು ವೀಕ್ಷಿಸುವ ಮಹಾಭಾಗ್ಯ ಭರತ ಖಂಡದ ಎಲ್ಲರಿಗೆ ಒದಗಿ ಬರಲಿ ಎಂಬುದಾಗಿಯೂ ನಾವು ಶ್ರೀಕೃಷ್ಣ ಮತ್ತು ಶ್ರೀರಾಮ ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದೇವೆ ಎಂದೂ ಶ್ರೀಪಾದರು ನುಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…