Featured

ಅಯೋಧ್ಯೆ ವಿಚಾರಣೆ ಜ.10ರಂದು ಪ್ರಕಟ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿಆಯೋಧ್ಯೆಯಲ್ಲಿನ ರಾಮ ಜನ್ಮಭೂಮಿ – ಬಾಬರಿ ಮಸೀದಿ ಭೂ ಒಡೆತನ ಯಾರಿಗೆ ಸೇರಿದ್ದು ಎಂಬ ಪ್ರಕರಣದ ವಿಚಾರಣೆ ದಿನಾಂಕವನ್ನು ಸೂಕ್ತ ಪೀಠವು ಇದೇ ಜನವರಿ 10ರಂದು ಪ್ರಕಟಿಸಿ ಆದೇಶ ಹೊರಡಿಸಲಿದೆ ಎಂದು ಸುಪ್ರೀಂ ಕೋರ್ಟ್‌ ಇಂದು ಹೇಳಿದೆ.

ಸುಪ್ರೀಂ ಕೋರ್ಟ್‌ ವರಿಷ್ಠ ನ್ಯಾಯಮೂರ್ತಿ ಜಸ್ಟಿಸ್‌ ರಂಜನ್‌ ಗೊಗೋಯ್‌ ಮತ್ತು ಜಸ್ಟಿಸ್‌ ಎಸ್‌ ಕೆ ಕೌಲ್‌ ಅವರನ್ನು ಒಳಗೊಂಡ ಪೀಠ ಈ ವಿಷಯವನ್ನು ಇಂದು ಪ್ರಕಟಿಸಿತು.

ರಾಮ ಜನ್ಮಭೂಮಿ – ಬಾಬರಿ ಮಸೀದಿ ಭೂ ವಿವಾದ ಕೇಸು ಇಂದು ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಂದ ಒಡನೆಯೇ ವರಿಷ್ಠ ನ್ಯಾಯಮೂರ್ತಿಗಳಿದ್ದ ಪೀಠ ಈ ನಿರ್ಧಾರ ಕೈಗೊಂಡಿತು.

ರಾಮ ಜನ್ಮಭೂಮಿ – ಬಾಬರಿ ಮಸೀದಿಯ ವಿವಾದಿತ 2.77 ಎಕರೆ ನಿವೇಶನವನ್ನು ಮೂವರು ಕಕ್ಷಿದಾರರಾಗಿರುವ ಸುನ್ನಿ ವಕ್‌ಫ್ ಬೋರ್ಡ್‌, ನಿರ್ಮೋಹಿ ಅಖಾಡಾ ಮತ್ತು ರಾಮ ಲಲ್ಲಾ ಅವರೊಳಗೆ ಸಮಾನವಾಗಿ ಹಂಚಬೇಕೆಂದು ನಾಲ್ಕು ಸಿವಿಲ್‌ ದಾವೆಗಳಲ್ಲಿ ಅಲಹಾಬಾದ್‌ ಹೈಕೋರ್ಟ್‌ 2010ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ 14 ಅಪೀಲುಗಳ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಮೂವರು ನ್ಯಾಯಾಧೀಶರರನ್ನು ಒಳಗೊಂಡ ಪೀಠವನ್ನು ರಚಿಸುವ ಸಾಧ್ಯತೆ ಇದೆ.

ಅರ್ಜಿಗಳನ್ನು ಸೂಕ್ತ ಪೀಠಕ್ಕೆ ನಿಗದಿ ಮಾಡುವ ದಿನಾಂಕವನ್ನು ನಿರ್ಧಾರ ಮಾಡುವುದಾಗಿ ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳು ಡಿ. 24ರಂದು ತಿಳಿಸಿದ್ದರು. ಅದೇ ದಿನ ಮಾತನಾಡಿದ್ದ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​, ವಿವಾದವನ್ನು ದಿನಂಪ್ರತಿ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್​ ಶೀಘ್ರ ತೀರ್ಪು ಪ್ರಕಟಿಸಿಬೇಕೆಂದು ಕೇಂದ್ರ ಸರ್ಕಾರ ಬಯಸುತ್ತದೆ ಎಂದು ಹೇಳಿದ್ದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago