ಅಯೋಧ್ಯೆ ವಿವಾದ : ಆಗಸ್ಟ್ 6 ರಿಂದ ಪ್ರತಿದಿನ ವಿಚಾರಣೆ : ಸುಪ್ರೀಂ ಕೋರ್ಟ್ ಆದೇಶ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ : ಇಂದು ಅಯೋಧ್ಯೆ ರಾಮಮಂದಿರ ಜನ್ಮಭೂಮಿ ಕುರಿತ ಪ್ರಕರಣದ ವಿಚಾರಣೆ, ಸುಪ್ರೀಂ ಕೋರ್ಟ್ ನಲ್ಲಿ ನಡೆಯಿತು. ಈ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ಆಗಸ್ಟ್ 6 ರಿಂದ ಪ್ರತಿದಿನ ವಿಚಾರಣೆ ನಡೆಸುವುದಾಗಿ ಹೇಳಿದೆ.

ರಾಜಕೀಯವಾಗಿ ಅತ್ಯಂತ ಸೂಕ್ಷ್ಮವಾಗಿರುವ ಅಯೋಧ್ಯೆಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಜಮೀನು ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಮಧ್ಯಸ್ಥಿಕೆ ಸಮಿತಿ ಯಶಸ್ವಿಯಾಗದಿರುವುದನ್ನು ಗಮನಿಸಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ಸದಸ್ಯರನ್ನು ಒಳಗೊಂಡ ಸಾಂವಿಧಾನಿಕ ನ್ಯಾಯಪೀಠ ಆಗಸ್ಟ್ 6ರಿಂದ ಪ್ರತಿದಿನ ಪ್ರಕರಣದ ವಿಚಾರಣೆ ನಡೆಸಲು ನಿರ್ಧರಿಸಿದೆ.