ಹೊಸದಿಲ್ಲಿ, :ಅಯೋಧ್ಯೆಯ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆಯನ್ನು ಜನವರಿ 29ಕ್ಕೆ ಮುಂದೂಡಿದೆ.
ಅಯೋಧ್ಯೆಯಲ್ಲಿ ರಾಮಮಂದಿರ –ಬಾಬ್ರಿ ಮಸೀದಿ ವಿವಾದ ಕುರಿತು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ಇಂದಿನಿಂದ ವಿಚಾರಣೆ ನಿಗದಿಯಾಗಿತ್ತು. ಆದರೆ ಸಾಂವಿಧಾನಿಕ ಪೀಠದಲ್ಲಿ ಒಬ್ಬರಾದ ನ್ಯಾಯಮೂರ್ತಿ ಉದಯ್ ಲಲಿತ್ ವಿಚಾರಣೆಯಿಂದ ಹಿಂದೆ ಸರಿದ ಹಿನ್ನೆಲೆ ವಿಚಾರಣೆಯನ್ನ ಮುಂದೂಡಲಾಗಿದೆ.
ವಿಚಾರಣೆ ಪೀಠದಲ್ಲಿದ್ದ ಐವರು ನ್ಯಾಯಮೂರ್ತಿಗಳಲ್ಲಿ ಒಬ್ಬರಾಗಿರುವ ಉದಯ್ ಲಲಿತ್ ವಿಚಾರಣೆಯಿಂದ ಹಿಂದೆ ಸರಿದ ಹಿನ್ನಲೆಯಲ್ಲಿ ವಿಚಾರಣೆಯನ್ನು 29 ಕ್ಕೆ ಮುಂದೂಡಲಾಗಿದೆ. ಇಂದು ವಿಚಾರಣೆ ಆರಂಭಿಸಿದ ರಂಜನ್ ಗೊಗೊಯ್ ನೇತೃತ್ವದ ಪೀಠ ‘ಅಯೋಧ್ಯೆ ಪ್ರಕರಣದಲ್ಲಿ ಇಂದು ವಿಚಾರಣೆ ನಡೆಯುವುದಿಲ್ಲ. ವಿಚಾರಣೆಯ ಅರ್ಜಿಗಳನ್ನು ಮಾತ್ರ ನಾವು ಕೈಗೆತ್ತಿಕೊಳ್ಳುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೋಗಯ್ ವಿವಾದ ವಿಚಾರಣೆ ಸಂಬಂಧ ಹೊಸ ಪೀಠ ರಚನೆ ಮಾಡಲಾಗುತ್ತದೆ. ಜನವರಿ 29ರಿಂದ ಹೊಸಪೀಠದಲ್ಲಿ ವಿಚಾರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ನ್ಯಾಯಮೂರ್ತಿ ಉದಯ್ ಲಲಿತ್ ಅವರು ವಿಚಾರಣಾ ಪೀಠದಲ್ಲಿರುವ ಕುರಿತು ವಕೀಲರಾದ ರಾಜೀವ್ ಧವನ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…