ನವದೆಹಲಿ, : ಅಯೋಧ್ಯೆ ವಿವಾದವನ್ನು ನಮಗೆ ಹಸ್ತಾಂತರಿಸಿದರೆ ನಾವು ಅದನ್ನು ಕೇವಲ 24 ಗಂಟೆಯಲ್ಲೇ ಬಗೆಹರಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.
ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಗಳು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ. ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದಷ್ಟು ಬೇಗ ತೀರ್ಪು ನೀಡಬೇಕು.ಬೇಗ ತೀರ್ಪು ನೀಡಲು ಸಾಧ್ಯವಾಗದಿದ್ದರೆ ವಿವಾದವನ್ನು ನಮಗೆ ಒಪ್ಪಿಸಿ. ನಾವು 24 ಗಂಟೆಯಲ್ಲಿ ಇತ್ಯರ್ಥಪಡಿಸುತ್ತೇವೆ ಎಂದು ಅವರು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂಬ ವಿಚಾರದಲ್ಲಿ ಜನಸಾಮಾನ್ಯರು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ ,ಉತ್ತರ ಪ್ರದೇಶದಲ್ಲಿ 2014ರಲ್ಲಿ ಗೆದ್ದ ಸ್ಥಾನಗಳಿಗಿಂತಲೂ ಹೆಚ್ಚು ಸ್ಥಾನಗಳನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಆದಿತ್ಯನಾಥ್ ಭವಿಷ್ಯ ನುಡಿದಿದ್ದಾರೆ.
ಅಯೋಧ್ಯೆ ವಿವಾದವನ್ನು ನೀವು ಮಾತುಕತೆ ಮೂಲಕ ಬಗೆಹರಿಸುತ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯೋಗಿ, ಕೋರ್ಟ್ ಮೊದಲು ವಿವಾದವನ್ನು ನಮಗೆ ಒಪ್ಪಿಸಲಿ ಎಂದರು.ನಾನು ಈಗಲೂ ಸಹ ಆದಷ್ಟು ಬೇಗ ತೀರ್ಪು ನೀಡುವಂತೆ ಕೋರ್ಟ್‍ಗೆ ಮನವಿ ಮಾಡುತ್ತಿದ್ದೇನೆ. ವಿವಾದವನ್ನು ಅನಗತ್ಯವಾಗಿ ಎಳೆಯಲಾಗುತ್ತಿದೆ. ನಮಗೆ ಆದಷ್ಟು ಬೇಗ ನ್ಯಾಯ ಲಭಿಸಬೇಕು ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…