Featured

ಅಯೋಧ್ಯೆ ವಿವಾದ : ಸುಪ್ರೀಂಕೋರ್ಟ್ ಗೆ ತೀರ್ಪು ನೀಡಲು ಸಾಧ್ಯವಾಗದಿದ್ದರೆ ಈ ಪ್ರಕರಣವನ್ನು 24 ಗಂಟೆಗಳ ಒಳಗಾಗಿ ಬಗೆಹರಿಸುತ್ತೇವೆ : ಯೋಗಿ ಆದಿತ್ಯನಾಥ್ – Vishwanews24

ನವದೆಹಲಿ, : ಅಯೋಧ್ಯೆ ವಿವಾದವನ್ನು ನಮಗೆ ಹಸ್ತಾಂತರಿಸಿದರೆ ನಾವು ಅದನ್ನು ಕೇವಲ 24 ಗಂಟೆಯಲ್ಲೇ ಬಗೆಹರಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಗಳು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ. ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದಷ್ಟು ಬೇಗ ತೀರ್ಪು ನೀಡಬೇಕು.ಬೇಗ ತೀರ್ಪು ನೀಡಲು ಸಾಧ್ಯವಾಗದಿದ್ದರೆ ವಿವಾದವನ್ನು ನಮಗೆ ಒಪ್ಪಿಸಿ. ನಾವು 24 ಗಂಟೆಯಲ್ಲಿ ಇತ್ಯರ್ಥಪಡಿಸುತ್ತೇವೆ ಎಂದು ಅವರು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂಬ ವಿಚಾರದಲ್ಲಿ ಜನಸಾಮಾನ್ಯರು ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ ,ಉತ್ತರ ಪ್ರದೇಶದಲ್ಲಿ 2014ರಲ್ಲಿ ಗೆದ್ದ ಸ್ಥಾನಗಳಿಗಿಂತಲೂ ಹೆಚ್ಚು ಸ್ಥಾನಗಳನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಆದಿತ್ಯನಾಥ್ ಭವಿಷ್ಯ ನುಡಿದಿದ್ದಾರೆ.

ಅಯೋಧ್ಯೆ ವಿವಾದವನ್ನು ನೀವು ಮಾತುಕತೆ ಮೂಲಕ ಬಗೆಹರಿಸುತ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯೋಗಿ, ಕೋರ್ಟ್ ಮೊದಲು ವಿವಾದವನ್ನು ನಮಗೆ ಒಪ್ಪಿಸಲಿ ಎಂದರು.ನಾನು ಈಗಲೂ ಸಹ ಆದಷ್ಟು ಬೇಗ ತೀರ್ಪು ನೀಡುವಂತೆ ಕೋರ್ಟ್‍ಗೆ ಮನವಿ ಮಾಡುತ್ತಿದ್ದೇನೆ. ವಿವಾದವನ್ನು ಅನಗತ್ಯವಾಗಿ ಎಳೆಯಲಾಗುತ್ತಿದೆ. ನಮಗೆ ಆದಷ್ಟು ಬೇಗ ನ್ಯಾಯ ಲಭಿಸಬೇಕು ಎಂದು ತಿಳಿಸಿದರು.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

5 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

5 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

6 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago