ಭೋಪಾಲ್: ಅಯೋಧ್ಯೆ ಹಾಗೂ ಕಾಶಿ ನಂತರ ಮಥುರಾದಲ್ಲೂ ಕೃಷ್ಣನ ಭವ್ಯ ಮಂದಿರ ನಿರ್ಮಾಣವಾಗಲಿದೆ ಎಂದು ಬಿಜೆಪಿ ಸಂಸದೆ ಹೇಮಾ ಮಾಲಿನಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಜನ್ಮ ಭೂಮಿ ಹಾಗೂ ಕಾಶಿಯಷ್ಟೇ ಮಥುರವೂ ತನ್ನದೇ ಆದ ಮಹತ್ವವನ್ನು ಪಡೆದಿದೆ. ಅವುಗಳ ಮರುಸ್ಥಾಪನೆಯ ನಂತರ ಮಥುರಾದಲ್ಲೂ ಭವ್ಯ ಮಂದಿರ ನಿರ್ಮಿಸಲಾಗುತ್ತದೆ ಎಂದರು.
ಪ್ರೀತಿ, ವಾತ್ಸಲ್ಯದ ಪ್ರತೀಕ ಶ್ರೀಕೃಷ್ಣ. ಮಥುರಾ ಶ್ರೀಕೃಷ್ಣನ ಜನ್ಮಸ್ಥಳವಾಗಿದೆ. ಅಲ್ಲಿ ಕೃಷ್ಣನ ಭವ್ಯವಾದ ಮಂದಿರವಿರಬೇಕು. ಈಗ ಅಲ್ಲಿ ದೇವಸ್ಥಾನವಿದ್ದು, ಪ್ರಧಾನಿ ಮೋದಿ ಅವರು ಕಾಶಿಯಲ್ಲಿ ಅಭಿವೃದ್ಧಿ ಪಡಿಸಿದ ಕಾರಿಡಾರ್‌ನಂತೆ ಸುಂದರಗೊಳಿಸಬಹುದು. ಜೊತೆಗೆ ದೇವಸ್ಥಾನದಿಂದ ಗಂಗಾ ನದಿಯನ್ನು ನೇರವಾಗಿ ನೋಡಬಹುದು ಎಂದು ಹೇಳಿದರು.
ಕಾಶಿ ವಿಶ್ವನಾಥನ ಪುನಾರಾಭಿವೃದ್ಧಿ ಬಹಳ ಕಷ್ಟಕರವಾಗಿತ್ತು. ಆದರೂ ಇಂದು ಕಾಶಿಯಲ್ಲಿ ದೇವಸ್ಥಾನದ ಅಭಿವೃದ್ಧಿಯಾಗುತ್ತಿದೆ. ಇದರಿಂದ ಪ್ರಧಾನಿ ಮೋದಿ ಅವರ ದೂರದೃಷ್ಟಿಯನ್ನು ನಾವು ನೋಡಬಹುದಾಗಿದೆ. ಈ ರೀತಿಯೇ ಮಥುರಾದಲ್ಲಿ ಆಗುತ್ತದೆ ಎಂದು ಭರವಸೆ ನೀಡಿದರು. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಬಿಜೆಪಿ ಸಂಸದೆ, ಕಾಶಿಗೆ ತೆರಳುತ್ತಿರುವುದಾಗಿ ತಿಳಿಸಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…