Featured

ಅಯೋಧ್ಯೆ ಹಾಗೂ ಕಾಶಿ ನಂತರ ಮಥುರಾದಲ್ಲೂ ಕೃಷ್ಣನ ಭವ್ಯ ಮಂದಿರ ನಿರ್ಮಾಣ : ಹೇಮಾ ಮಾಲಿನಿ – Vishwanews24

ಅಯೋಧ್ಯೆ ಹಾಗೂ ಕಾಶಿ ನಂತರ ಮಥುರಾದಲ್ಲೂ ಕೃಷ್ಣನ ಭವ್ಯ ಮಂದಿರ ನಿರ್ಮಾಣ : ಹೇಮಾ ಮಾಲಿನಿ – Vishwanews24

ಭೋಪಾಲ್: ಅಯೋಧ್ಯೆ ಹಾಗೂ ಕಾಶಿ ನಂತರ ಮಥುರಾದಲ್ಲೂ ಕೃಷ್ಣನ ಭವ್ಯ ಮಂದಿರ ನಿರ್ಮಾಣವಾಗಲಿದೆ ಎಂದು ಬಿಜೆಪಿ ಸಂಸದೆ ಹೇಮಾ ಮಾಲಿನಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಜನ್ಮ ಭೂಮಿ ಹಾಗೂ ಕಾಶಿಯಷ್ಟೇ ಮಥುರವೂ ತನ್ನದೇ ಆದ ಮಹತ್ವವನ್ನು ಪಡೆದಿದೆ. ಅವುಗಳ ಮರುಸ್ಥಾಪನೆಯ ನಂತರ ಮಥುರಾದಲ್ಲೂ ಭವ್ಯ ಮಂದಿರ ನಿರ್ಮಿಸಲಾಗುತ್ತದೆ ಎಂದರು.

ಪ್ರೀತಿ, ವಾತ್ಸಲ್ಯದ ಪ್ರತೀಕ ಶ್ರೀಕೃಷ್ಣ. ಮಥುರಾ ಶ್ರೀಕೃಷ್ಣನ ಜನ್ಮಸ್ಥಳವಾಗಿದೆ. ಅಲ್ಲಿ ಕೃಷ್ಣನ ಭವ್ಯವಾದ ಮಂದಿರವಿರಬೇಕು. ಈಗ ಅಲ್ಲಿ ದೇವಸ್ಥಾನವಿದ್ದು, ಪ್ರಧಾನಿ ಮೋದಿ ಅವರು ಕಾಶಿಯಲ್ಲಿ ಅಭಿವೃದ್ಧಿ ಪಡಿಸಿದ ಕಾರಿಡಾರ್‌ನಂತೆ ಸುಂದರಗೊಳಿಸಬಹುದು. ಜೊತೆಗೆ ದೇವಸ್ಥಾನದಿಂದ ಗಂಗಾ ನದಿಯನ್ನು ನೇರವಾಗಿ ನೋಡಬಹುದು ಎಂದು ಹೇಳಿದರು.

ಕಾಶಿ ವಿಶ್ವನಾಥನ ಪುನಾರಾಭಿವೃದ್ಧಿ ಬಹಳ ಕಷ್ಟಕರವಾಗಿತ್ತು. ಆದರೂ ಇಂದು ಕಾಶಿಯಲ್ಲಿ ದೇವಸ್ಥಾನದ ಅಭಿವೃದ್ಧಿಯಾಗುತ್ತಿದೆ. ಇದರಿಂದ ಪ್ರಧಾನಿ ಮೋದಿ ಅವರ ದೂರದೃಷ್ಟಿಯನ್ನು ನಾವು ನೋಡಬಹುದಾಗಿದೆ. ಈ ರೀತಿಯೇ ಮಥುರಾದಲ್ಲಿ ಆಗುತ್ತದೆ ಎಂದು ಭರವಸೆ ನೀಡಿದರು. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಬಿಜೆಪಿ ಸಂಸದೆ, ಕಾಶಿಗೆ ತೆರಳುತ್ತಿರುವುದಾಗಿ ತಿಳಿಸಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago