desha

ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಮಹಿಳಾ ಪತ್ರಕರ್ತೆಯರು ವಾಪಸ್..

ತಿರುವನಂತಪುರಂ: ಸುಪ್ರೀಂ ಕೋರ್ಟ್ ಆದೇಶ, ಕೇರಳ ಪೊಲೀಸರ ಭಾರಿ ಭದ್ರತೆಯ ನಡುವೆಯೂ ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶ ಅಸಾಧ್ಯವಾಗಿದ್ದು, ಶಬರಿಮಲೆಯಿಂದ ಮಹಿಳಾ ಪತ್ರಕರ್ತೆಯರು ವಾಪಸ್ ಆಗಿದ್ದಾರೆ.

ಪುರಾತನ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇಗುಲ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಇಬ್ಬರು ಮಹಿಳಾ ಪತ್ರಕರ್ತೆಯರು ಇಂದು ದೇಗುಲ ಪ್ರವೇಶಕ್ಕೆ ಯತ್ನಿಸಿದ್ದರು. ಆಂಧ್ರ ಪ್ರದೇಶ ಮೂಲದ ಪತ್ರಕರ್ತೆ ಕವಿತಾ ಜಕ್ಕಲ್ ಮತ್ತು ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾ ಶಬರಿಮಲೆಯತ್ತ ಪ್ರಯಾಣ ಆರಂಭಿಸಿದ್ದರು. ಆದರೆ ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆಗೆ ಅವರು ಮಣಿದಿದ್ದು, ಶಬರಿಮಲೆಯಿಂದ ವಾಪಸ್ ತೆರಳಲು ನಿರ್ಧರಿಸಿದ್ದಾರೆ.
ಸುಮಾರು 200 ಪೊಲೀಸರ ಸರ್ಪಗಾವಲಿನಲ್ಲಿ ಮಹಿಳೆಯರು ದೇಗುಲದತ್ತ ಹೆಜ್ಜೆ ಹಾಕಿದ್ದಾರೆ. ಪೊಲೀಸರಂತೆ ಹೆಲ್ಮೆಟ್ ಹಾಗೂ ಸಮವಸ್ತ್ರ ಧರಿಸಿ ಭಾರೀ ಭದ್ರತೆಯ ಮೂಲಕ ದೇವಾಲಯದತ್ತ ತೆರಳಿದ್ದರು. ಮಹಿಳೆಯರು ಪಂಪಾ ದಾಟುತ್ತಿದ್ದಂತೆಯೇ ಪ್ರತಿಭಟನೆ ತೀವ್ರಗೊಂಡಿದ್ದು, ಸ್ವತಃ ಅಯ್ಯಪ್ಪ ಸ್ವಾಮಿ ದೇಗುಲದ ಪ್ರಧಾನ ಅರ್ಚಕರು ಮಹಿಳೆಯರ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಶಬರಿಲಮಯೆ ಪವಿತ್ರ 18 ಮೆಟ್ಟಿಲುಗಳ ಮೇಲೆ ಅಯ್ಯಪ್ಪ ಸ್ವಾಮಿ ಭಕ್ತರು ಕುಳಿತು ನಾವು ಸತ್ತರೂ ಸರಿಯೇ ಮೆಟ್ಟಿಲ ಮೂಲಕ ಮಹಿಳೆಯರು ತೆರಳಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ಪರಿಸ್ಥಿತಿ ಕೈ ಮೀರುತ್ತಿದೆ ಎಂದು ತಿಳಿದ ಪೊಲೀಸ್ ವರಿಷ್ಠಾಧಿಕಾರಿಗಳು ಪಥನಂತಿಟ್ಟ ಕಚೇರಿಯಲ್ಲಿ ಸಂಧಾನ ಸಭೆ ಆಯೋಜಿಸಿದರು. ಈ ವೇಳೆ ಕಚೇರಿಗೆ ಮಹಿಳಾ ಪತ್ರಕರ್ತೆಯರನ್ನೂ ಕರೆಸಿಕೊಂಡ ಅಧಿಕಾರಿಗಳು ಈ ಗಂಭೀರ ಪರಿಸ್ಥಿತಿಯಲ್ಲಿ ದೇವರ ದರ್ಶನ ಬೇಡ ಎಂದು ಪತ್ರಕರ್ತೆಯರ ಮನವೊಲಿಸಿದ್ದಾರೆ.
ಅಂತಿಮವಾಗಿ ಮಹಿಳಾ ಪತ್ರಕರ್ತೆಯರು ಶಬರಿಮಲೆಯಿಂದ ವಾಪಸ್ ತೆರಳು ನಿರ್ಧರಿಸಿದ್ದಾರೆ.
Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago