Featured

ಅಯ್ಯಪ್ಪಸ್ವಾಮಿ ಕೃಪೆಯಿಂದಲೇ ನಾನು CM ಆಗಿದ್ದು-ಕುಮಾರಸ್ವಾಮಿ

ಕೊಚ್ಚಿಃ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಕೃಪೆಯಿಂದಲೇ ನಾನು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದು, ತಾವೊಬ್ಬರು ಅಯ್ಯಪ್ಪನ ಪರಮ ಭಕ್ತರು ಎಂದೂ ಕೂಡ ಹೇಳಿಕೊಂಡಿದ್ದಾರೆ.

ನಗರದಲ್ಲಿ ಜನತಾದಳ ಘಟಕದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈ ಹಿಂದೆ ಕೇರಳ ಜಲ ಸಂಪನ್ಮೂಲ ಸಚಿವ ಮ್ಯಾಥ್ಯೂ ಟಿ. ಥಾಮಸ್ ಸೇರಿದಂತೆ ಇತರ ಮುಖಂಡರ ಜತೆಗೆ ಶಬರಿಮಲೆಗೆ ಹೋಗುತ್ತಿದ್ದದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಂಡರು.

ಅಲ್ಲದೆ, 2005 ರಲ್ಲಿ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ 2006 ರಲ್ಲಿಯೇ ಮುಖ್ಯ ಮಂತ್ರಿಯಾದೆ, ತದ ನಂತರ ಇದೀಗ ಮತ್ತೆ ಆ ಸ್ಥಾನ ಅಲಂಕರಿಸಿದ್ದೇನೆ. ಮುಖ್ಯವಾಗಿ ಈ ಬಾರಿ ಜೆಡಿಎಸ್ ಗೆ ಬಹುಮತ ಸಿಗದಿದ್ದರೂ ಮುಖ್ಯಮಂತ್ರಿ ಸ್ಥಾನ ದೊರೆತಿದೆ. ಇದಕ್ಕೆಲ್ಲ ಅಯ್ಯಪ್ಪ ಸ್ವಾಮಿಯ ಕೃಪೆಯೇ ಕಾರಣ.

ನಾನು ದೈವ ಭಕ್ತ. ದೇವರಲ್ಲಿ ನಂಬಿಕೆ ಇಟ್ಟುಕೊಂಡು ಬೆಳೆದವನು. ಎಲ್ಲವೂ ನಡೆಸಿಕೊಡುವಾತ ಅಯ್ಯಪ್ಪಸ್ವಾಮಿ ಆತನ ಮುಂದೆ ನಮ್ಮದೇನಿಲ್ಲ. ಸರ್ವಸ್ವವೂ ಆತನೆ ಇರುವಾಗ ನಮ್ಮದೇನಿದೆ. ನಾವು ಪಾತ್ರದಾರಿಗಳು ಮಾತ್ರ. ಉಳಿದೆಲ್ಲವು ಆ ದೇವರದ್ದೆ ಆಟ ಎಲ್ಲರೂ ದೇವಶಕ್ತಿಗೆ ತಲೆಬಾಗಲೇ ಬೇಕು ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಮತ್ತು ಕೇರಳ ಘಟಕದ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago