ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ- vishwanews24

Featured, ರಾಜ್ಯ ನ್ಯೂಸ್

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.

ಸೋಮವಾರ (ಜೂ.15) ಮುಂಜಾನೆ ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಪವಿತ್ರ ಮಾಲೆ ಧರಿಸಿ ಯಾತ್ರೆ ಕೈಗೊಂಡಿದ್ದಾರೆ. ರಾತ್ರಿ 8 ಗಂಟೆಗೆ ಅಯ್ಯಪ್ಪ ಸ್ವಾಮಿಯ  ದರ್ಶನ ಪಡೆಯಲಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ಕಾಲ ಪಡಿಪೂಜೆ ಸೇರಿ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ.

ಇದನ್ನೂ ಓದಿ:

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ :ಸಿಎಂ ಡಿಕೆಶಿ ಭರವಸೆ  – vishwanews24

ಕುಮಾರಸ್ವಾಮಿಯವರ ಜೊತೆ ಮಾಜಿ ಸಚಿವ ಸಾ.ರಾ. ಮಹೇಶ್, ಸಿ.ಎಸ್ ಪುಟ್ಟರಾಜು, JDLP ನಾಯಕ ಸುರೇಶ್ ಬಾಬು, MLC ಭೋಜೇಗೌಡ ಸೇರಿ 30 ಜನ ಭಕ್ತರ ತಂಡ ಶಬರಿಮಲೆಗೆ ತೆರಳಿದೆ.

Leave a Reply