ಉಡುಪಿ

ಅಯ್ಯಪ್ಪ ಸೇವಾ ಸಮಾಜ ಕಾಪು ವಲಯ ಅಧ್ಯಕ್ಷ ಹರೀಶ್ ಶೆಟ್ಟಿ ಅವರಿಗೆ ಕಾಪು ಲಕ್ಷ್ಮಿ ಜನಾರ್ಧನ ಸಭಾಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಕೆ -Vishwanews24

ಅಯ್ಯಪ್ಪ ಸೇವಾ ಸಮಾಜ ಕಾಪು ವಲಯ ಅಧ್ಯಕ್ಷ ಹರೀಶ್ ಶೆಟ್ಟಿ ಅವರಿಗೆ ಕಾಪು ಲಕ್ಷ್ಮಿ ಜನಾರ್ಧನ ಸಭಾಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಕೆ -Vishwanews24

ಕಾಪು: ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಾಗೂ ಅಯ್ಯಪ್ಪ ಸೇವಾ ಸಮಾಜ ಕಾಪು ವಲಯದ ಅಧ್ಯಕ್ಷರಾದ ಹರೀಶ್ ಶೆಟ್ಟಿ ಅವರಿಗೆ ಅಯ್ಯಪ್ಪ ಸೇವಾ ಸಮಾಜ ಕಾಪು ವಲಯ ವತಿಯಿಂದ ಕಾಪು ಲಕ್ಷ್ಮಿ ಜನಾರ್ಧನ ಸಭಾಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಹರೀಶ್ ಶೆಟ್ಟಿ, ಉಚ್ಚಿಲ ಪರಿಸರದ ಹೆಚ್ಚಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಮುಂಚೂಣಿಯಲ್ಲಿದ್ದು, ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಸುಮಾರು 20 ವರ್ಷಗಳಿಂದ ನಿರಂತರವಾಗಿ ಅಯ್ಯಪ್ಪ ಸ್ವಾಮಿ ವ್ರತ ಕೈಗೊಳ್ಳುತ್ತಿದ್ದು, ಹಿರಿಯ, ಕಿರಿಯ ವ್ರತಧಾರಿಗಳಿಗೆ ಮಾರ್ಗದರ್ಶಕರಾಗಿದ್ದರು. ಅವರ ಆದರ್ಶ ಇತರರಿಗೆ ಮಾದರಿ ಎಂದು ಸಮಾಜ ಸೇವಕ, ರಂಗ ತರಂಗ ಸಂಸ್ಥೆ ಮುಖ್ಯಸ್ಥ ಕರಂದಾಡಿ ಲೀಲಾಧರ ಶೆಟ್ಟಿ ನುಡಿನಮನ ಸಲ್ಲಿಸಿದರು.

ಶ್ರೀ ಅಯ್ಯಪ್ಪ ಸೇವಾ ಸಮಾಜದ ಜಿಲ್ಲಾ ಉಪಾಧ್ಯಕ್ಷ ಗೋಪಾಲ ಪೂಜಾರಿ, ಕಾರ್ಯಾಧ್ಯಕ್ಷ ರಘುರಾಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದಿವಾಕರ ಶೆಟ್ಟಿ, ಅನಿಲ್ ಶೆಟ್ಟಿ ಕೊಪ್ಪಲಂಗಡಿ, ಜಿತೇಶ್, ಶ್ರೀಧರ್ ಶೆಟ್ಟಿಗಾರ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago