ಕೊಚ್ಚಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಅರವಣ ಪ್ರಸಾದ ವಿತರಣೆಯನ್ನು ತಕ್ಷಣ ನಿಲ್ಲಿಸುವಂತೆ ಕೇರಳ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ.
ಅಯ್ಯಪ್ಪಸ್ವಾಮಿ ಪ್ರಸಾದಕ್ಕೆ ಬಳಕೆಯಾಗುವ ಏಲಕ್ಕಿಯನ್ನು ತಪಾಸಣೆಗೆ ಒಳಪಡಿಸಿದಾಗ ಕೀಟನಾಶಕದ ಉಳಿಕೆ ಪ್ರಮಾಣವು ಅಪಾಯಕಾರಿ ಮಟ್ಟದಲ್ಲಿದ್ದ ಸಂಗತಿ ಬೆಳಕಿಗೆ ಬಂದಿದೆ.. ‘ಮನುಷ್ಯರ ಬಳಕೆಗೆ ಇದು ಸುರಕ್ಷಿತ ಅಲ್ಲ’ ಎಂದು ಆಹಾರ ವಿಜ್ಞಾನಿಗಳು ಅಭಿಪ್ರಾಯಪಟ್ಟ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್ ಪ್ರಸಾದ ವಿತರಣೆ ನಿಲ್ಲಿಸುವಂತೆ ಆದೇಶ ಹೊರಡಿಸಿತು.
ಏಲಕ್ಕಿಯಲ್ಲಿ 14 ಕೀಟನಾಶಕಗಳ ಉಳಿಕೆ ಪತ್ತೆ
ಅಪಾಯಕಾರಿ ಮಟ್ಟದಲ್ಲಿ ಕೀಟನಾಶಕದ ಉಳಿಕೆ ಇರುವ ಏಲಕ್ಕಿ ಬಳಸಿ ಸಿದ್ಧಪಡಿಸಿದ ಪ್ರಸಾದವನ್ನು ಭಕ್ತರಿಗೆ ನೀಡುವಂತಿಲ್ಲ. ಈ ಆದೇಶ ಪಾಲನೆಯ ಖಾತ್ರಿಯ ಹೊಣೆಯು ಆಹಾರ ಸುರಕ್ಷಾ ಆಯುಕ್ತರದು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. ಪ್ರಯೋಗಾಲಯದ ವರದಿಯ ಪ್ರಕಾರ, ಈ ಏಲಕ್ಕಿಯಲ್ಲಿ 14 ಕೀಟನಾಶಕಗಳ ಉಳಿಕೆ ಪ್ರಮಾಣವು ಗರಿಷ್ಠ ಮಿತಿಯನ್ನು ಮೀರಿದೆ (Maximum Residue Limit – MRL). ಡಿತಿಯೊಕಾರ್ಬಮೇಟ್ಸ್, ಸೈಪರ್ಮೆತರಿನ್, ಇಮಿಡಾಕ್ಲೊಪ್ರಿಡ್ ಪ್ರಮಾಣ ಗಣನೀಯ ಮಟ್ಟದಲ್ಲಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…