ಹೊಸದಿಲ್ಲಿ: ಭಾರತೀಯ ನೌಕಾಪಡೆ ಸೇರಿದ ಮಿಗ್ -29ಕೆ ತರಬೇತುದಾರ ವಿಮಾನ ಗುರುವಾರ ಸಂಜೆ ಪತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅರಬ್ಬಿ ಸಮುದ್ರದಲ್ಲಿ ತರಬೇತುದಾರ ವಿಮಾನ ಪತನವಾಗಿದ್ದು, ಓರ್ವ ಪೈಲಟ್ ಬಚಾವ್ ಆಗಿದ್ದು ಮತ್ತೋರ್ವ ಪೈಲಟ್ ನಾಪತ್ತೆಯಾಗಿದ್ದಾನೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ.
ಅಪಘಾತದ ವೇಳೆ ಒಬ್ಬ ಪೈಲಟ್ ಕೂಡಲೇ ತನ್ನನ್ನು ತಾನು ರಕ್ಷಿಸಿಕೊಂಡರೆ ಮತ್ತೊರ್ವ ನಾಪತ್ತೆಯಾಗಿದ್ದಾನೆ. ಈತನಿಗಾಗಿ ಇದೀಗ ಶೋಧ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಘಟನೆ ಸಂಬಂಧ ನೌಕಾಪಡೆ ಅಪಘಾತದ ಕಾರಣವನ್ನು ಕಂಡುಹಿಡಿಯುವ ಉದ್ದೇಶದಿಂದ ಸಂಬಂಧಪಟ್ಟ ಅಧಿಕಾರಿಗಳು ತನಿಖೆಗೆ ಆದೇಶಿಸಿದೆ.
ಮಿಗ್ 29ಕೆ ತರಬೇತಿ ವಿಮಾನ ಅರಬ್ಬಿ ಸಮುದ್ರ ಪ್ರದೇಶದಲ್ಲಿ ಸಂಭವಿಸಿದ್ದು, ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ವರದಿ ವಿವರಿಸಿದೆ.
ಭಾರತೀಯ ನೌಕಾಪಡೆಯಲ್ಲಿ 40ಕ್ಕೂ ಅಧಿಕ ಮಿಗ್ 29 ಯುದ್ಧ ವಿಮಾನಗಳಿದ್ದು, ಇವುಗಳು ಗೋವಾ ಹಾಗೂ ಐಎನ್ ಎಸ್ ವಿಕ್ರಮಾದಿತ್ಯದ ಮೂಲಕ ಕಾರ್ಯಾಚರಿಸುತ್ತಿರುವುದಾಗಿ ತಿಳಿದು ಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…