Featured

ಅರಬ್‍ ದೇಶದಲ್ಲಿ ಮೊದಲ ಬಾರಿಗೆ ಹಿಂದೂ ದೇವಾಲಯ ನಿರ್ಮಾಣಕ್ಕೆ ಶಿಲಾನ್ಯಾಸ -Vishwanews24

ಅಬೂಧಾಬಿ:ಅರಬ್‍ ದೇಶದಲ್ಲಿ ಮೊದಲ ಬಾರಿಗೆ ಹಿಂದೂ ದೇವಾಲಯ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದೆ. ಯುಎಇ ರಾಜಧಾನಿ ಅಬುಧಾಬಿಯಲ್ಲಿ ಮೊದಲ ಹಿಂದೂ ಮಂದಿರಕ್ಕೆ ಶಿಲಾನ್ಯಾಸ ಮಾಡಲಾಯಿತು.

ಈ ದೇವಸ್ಥಾನವನ್ನು ನಿರ್ಮಿಸುತ್ತಿರುವ ಬೋಚಾಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್‌) ಇದರ ಆಧ್ಯಾತ್ಮಿಕ ಗುರುಗಳಾದ ಮಹಾಂತ ಸ್ವಾಮಿ ಮಹಾರಾಜ್‌ ಅವರು ಶಿಲಾನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಮಾರು ನಾಲ್ಕು ತಾಸುಗಳ ಕಾಲ ವಿಧ್ಯುಕ್ತವಾಗಿ ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪೂಜಿತ ಇಟ್ಟಿಗೆಗಳನ್ನು ಮುಖ್ಯ ಪೂಜಾ ಸ್ಥಳದಲ್ಲಿ ಸ್ಥಾಪಿಸಲಾಯಿತು.

ಯುಎಇಯಲ್ಲಿ ಮಂದಿರ ನಿರ್ಮಾಣ ಶಿಲಾನ್ಯಾಸಕ್ಕೆ ಭಾರತೀಯ ರಾಯಭಾರಿ ನವದೀಪ್‍ ಸೂರಿಯವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರದ ಮೂಲಕ ಶುಭಾಶಯ ಕಳಿಸಿದ್ರು. ಕಾರ್ಯಕ್ರಮದಲ್ಲಿ ಪತ್ರ ಓದಿದ ನವದೀಪ್‍ ಸೂರಿಯವರು ಮಾನವೀಯ ಮೌಲ್ಯಗಳು, ಧಾರ್ಮಿಕ ನಂಬಿಕೆಗಳು ಉಭಯ ದೇಶಗಳ ಪರಂಪರೆಯನ್ನು ಅರಿಯಲಿವೆ ಎಂದು ಪ್ರಧಾನಿ ಹೇಳಿದ್ದಾರೆ.

ಹಾಗೆಯೇ ಯುವರಾಜ ಶೇಖ್‍ ಮೊಹಮ್ಮದ್‍ಗೆ ಎಲ್ಲಾ ಭಾರತೀಯರ ಪರವಾಗಿ ಪ್ರಧಾನಿ ಶುಭಾಶಯ ತಿಳಿಸಿದ್ದಾರೆ ಎಂದರು. ಇದೇ ವೇಳೆ ಯುಎಇನಲ್ಲಿ ನಿರ್ಮಾಣವಾಗ್ತಿರುವ ಈ ಮಂದಿರ ಇಲ್ಲಿರುವ 33 ಲಕ್ಷ ಭಾರತೀಯರಿಗೆ ಸ್ಪೂರ್ತಿಯಾಗಲಿದೆ ಅಂತಾ ರಾಯಭಾರಿ ನವದೀಪ್‍ ಸೂರಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago