ಅಬೂಧಾಬಿ:ಅರಬ್ ದೇಶದಲ್ಲಿ ಮೊದಲ ಬಾರಿಗೆ ಹಿಂದೂ ದೇವಾಲಯ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದೆ. ಯುಎಇ ರಾಜಧಾನಿ ಅಬುಧಾಬಿಯಲ್ಲಿ ಮೊದಲ ಹಿಂದೂ ಮಂದಿರಕ್ಕೆ ಶಿಲಾನ್ಯಾಸ ಮಾಡಲಾಯಿತು.
ಈ ದೇವಸ್ಥಾನವನ್ನು ನಿರ್ಮಿಸುತ್ತಿರುವ ಬೋಚಾಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್) ಇದರ ಆಧ್ಯಾತ್ಮಿಕ ಗುರುಗಳಾದ ಮಹಾಂತ ಸ್ವಾಮಿ ಮಹಾರಾಜ್ ಅವರು ಶಿಲಾನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಮಾರು ನಾಲ್ಕು ತಾಸುಗಳ ಕಾಲ ವಿಧ್ಯುಕ್ತವಾಗಿ ನಡೆದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪೂಜಿತ ಇಟ್ಟಿಗೆಗಳನ್ನು ಮುಖ್ಯ ಪೂಜಾ ಸ್ಥಳದಲ್ಲಿ ಸ್ಥಾಪಿಸಲಾಯಿತು.
ಯುಎಇಯಲ್ಲಿ ಮಂದಿರ ನಿರ್ಮಾಣ ಶಿಲಾನ್ಯಾಸಕ್ಕೆ ಭಾರತೀಯ ರಾಯಭಾರಿ ನವದೀಪ್ ಸೂರಿಯವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರದ ಮೂಲಕ ಶುಭಾಶಯ ಕಳಿಸಿದ್ರು. ಕಾರ್ಯಕ್ರಮದಲ್ಲಿ ಪತ್ರ ಓದಿದ ನವದೀಪ್ ಸೂರಿಯವರು ಮಾನವೀಯ ಮೌಲ್ಯಗಳು, ಧಾರ್ಮಿಕ ನಂಬಿಕೆಗಳು ಉಭಯ ದೇಶಗಳ ಪರಂಪರೆಯನ್ನು ಅರಿಯಲಿವೆ ಎಂದು ಪ್ರಧಾನಿ ಹೇಳಿದ್ದಾರೆ.
ಹಾಗೆಯೇ ಯುವರಾಜ ಶೇಖ್ ಮೊಹಮ್ಮದ್‍ಗೆ ಎಲ್ಲಾ ಭಾರತೀಯರ ಪರವಾಗಿ ಪ್ರಧಾನಿ ಶುಭಾಶಯ ತಿಳಿಸಿದ್ದಾರೆ ಎಂದರು. ಇದೇ ವೇಳೆ ಯುಎಇನಲ್ಲಿ ನಿರ್ಮಾಣವಾಗ್ತಿರುವ ಈ ಮಂದಿರ ಇಲ್ಲಿರುವ 33 ಲಕ್ಷ ಭಾರತೀಯರಿಗೆ ಸ್ಪೂರ್ತಿಯಾಗಲಿದೆ ಅಂತಾ ರಾಯಭಾರಿ ನವದೀಪ್ ಸೂರಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…