ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭೂಯಾನ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠವು ಸೆ.5ರಂದು ಈ ಕುರಿತು ತೀರ್ಪನ್ನು ಕಾಯ್ದಿರಿಸಿತ್ತು. ಕೇಜ್ರಿವಾಲ್ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐನಿಂದ ಜಾಮೀನು ನಿರಾಕರಣೆ ಮತ್ತು ಬಂಧನವನ್ನು ಪ್ರಶ್ನಿಸಿ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಸಿಬಿಐ ನಡೆಸಿದ ಬಂಧನವು ನ್ಯಾಯಸಮ್ಮತವಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್,ದೀರ್ಘಾವಧಿಯ ಜೈಲುವಾಸವು ಸ್ವಾತಂತ್ರ್ಯದ ಹರಣಕ್ಕೆ ಸಮಾನವಾಗಿದೆ ಎಂದು ಹೇಳಿದೆ.
ಆದರೆ, ಜೂನ್ 26 ರಂದು ಸಿಬಿಐ ಕೇಜ್ರಿವಾಲ್ ಅವರನ್ನು ಬಂಧಿಸಿರುವುದು ಮಾನ್ಯವಾಗಿದೆ ಮತ್ತು ಸಂಬಂಧಿತ ಕಾರ್ಯವಿಧಾನದ ಕಾನೂನುಗಳಿಗೆ ಅನುಸಾರವಾಗಿದೆ ಎಂದು ಪೀಠವು ಪರಿಗಣಿಸಿದೆ.
ಇದಲ್ಲದೆ ಅಬಕಾರಿ ನೀತಿ ಪ್ರಕರಣದಲ್ಲಿ ದಿಲ್ಲಿ ಸಿಎಂ ಅವರನ್ನು ಸಿಬಿಐ ಬಂಧಿಸಿದ ಸಮಯ ಮತ್ತು ವಿಧಾನದ ಕುರಿತು ಭುಯಾನ್ ಅವರು ತಮ್ಮ ತೀರ್ಪಿನಲ್ಲಿ ಪ್ರಶ್ನೆಗಳನ್ನು ಎತ್ತಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…