ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿಯಿಂದ ಸುನೀಲ್ ಯಾದವ್ ಕಣಕ್ಕೆ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ದೇಶದ ರಾಜಧಾನಿ ನವದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕಣ್ಣಕ್ಕಿಳಿಯಲಿರುವ ಹತ್ತು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ತಡರಾತ್ರಿ ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಯುವ ಸುನೀಲ್ ಯಾದವ್‌ ಕಣ್ಣಕ್ಕಿಳಿಯಲಿದ್ದಾರೆ.

ಬಿಜೆಪಿ ತನ್ನ ಎರಡನೇ ಪಟ್ಟಿಯಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಇದರಲ್ಲಿ ಮತ್ತೊಂದು ಪ್ರಮುಖ ಹೆಸರೆಂದರೆ ತಾಜಿಂದರ್ ಪಾಲ್ ಬಗ್ಗ. ಹರಿನಗರ ಕ್ಷೇತ್ರದಿಂದ ತೇಜಿಂದರ್ ಪಾಲ್ ಬಗ್ಗ ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ವಕ್ತಾರರಾಗಿರುವ  ತೇಜಿಂದರ್ ಪಾಲ್ ಬಗ್ಗ ಅವರು ಟ್ವಿಟ್ಟರ್ ನಲ್ಲಿ ಸಂತಸ ವ್ಯಕ್ತಪಡಿಸಿ “ಬಗ್ಗ ಬಗ್ಗ ಹರ್ ಜಗಹ್” ಎಂಬ ರಾಪ್ ಹಾಡೊಂದನ್ನು ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿಯಾಗಿರುವ ಅರವಿಂದ್‌ ಕೇಜ್ರಿವಾಲ್‌ ಎದುರು ಯಾರು ಕಣ್ಣಕ್ಕಿಳಿಯಲಿದ್ದಾರೆ ಎಂಬುದು ಈವರೆಗೂ ಕುತೂಹಲ ಮೂಡಿಸಿತ್ತು.

70 ಸದಸ್ಯಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 8ರಂದು ಚುನಾವಣೆ ನಡೆಯಲಿದೆ. ಫೆಬ್ರವರಿ 11ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292