Featured

ಅರುಣಾಚಲ ಪ್ರದೇಶದಲ್ಲಿ6 ಜೆಡಿಯು ಶಾಸಕರು ಬಿಜೆಪಿಗೆ ಸೇರ್ಪಡೆ -Vishwanews24

ಅರುಣಾಚಲ ಪ್ರದೇಶದಲ್ಲಿ6 ಜೆಡಿಯು ಶಾಸಕರು ಬಿಜೆಪಿಗೆ ಸೇರ್ಪಡೆ -Vishwanews24

ಪಟ್ನಾ: ಅರುಣಾಚಲ ಪ್ರದೇಶದಲ್ಲಿ ಜೆಡಿ(ಯು) ಪಕ್ಷದ ಆರು ಶಾಸಕರು ಆಡಳಿತರೂಢ ಬಿಜೆ‍ಪಿಗೆ ಸೇರ್ಪಡೆಗೊಂಡಿದ್ದಾರೆಂದು ಅರುಣಾಚಲ ಪ್ರದೇಶದ ವಿಧಾನಸಭೆ ಬಿಡುಗಡೆ ಮಾಡಿದ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

 

ಅರುಣಾಚಲ ಪ್ರದೇಶದ ಪಂಚಾಯತ್‌ ಮತ್ತು ಪುರಸಭೆ ಚುನಾವಣಾ ಫಲಿತಾಂಶ ಪ್ರಕಟವಾಗುವ ಒಂದು ದಿನ ಮುಂಚಿತವಾಗಿ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲದ (ಪಿಪಿಎ) ಯ ಓರ್ವ ಶಾಸಕ ಮತ್ತು ಜೆಡಿ(ಯು)ನ ಆರು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಇನ್ನು ನವೆಂಬರ್‌ 26 ರಂದು ಜೆಡಿ(ಯು) ಪಕ್ಷವು ಜಿಕ್ಕೆ ಟಕೊ, ಡೊಂಗ್ರು ಸಿಯೊಂಗ್ಜು, ಡೋರ್ಜಿ ವಾಂಗ್ಡಿ ಖರ್ಮಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದಡಿ ಅಮಾನತುಗೊಳಿಸಿತ್ತು.

ಪಂಚಾಯಿತಿ ಮತ್ತು ಮುನ್ಸಿಪಲ್ ಚುನಾವಣೆಗಳ ಫಲಿತಾಂಶ ಪ್ರಕಟವಾದ ಮರುದಿನವೇ ಈ ಬೆಳವಣಿಗೆ ನಡೆದಿದೆ. 60 ಸದಸ್ಯರ ಅರುಣಾಚಲ ಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿಯು ತನ್ನ ಬಲವನ್ನು ಈಗ 48ಕ್ಕೆ ಏರಿಸಿಕೊಂಡಂತಾಗಿದೆ. ಆದರೆ ಜೆಡಿಯುನಲ್ಲಿ ಒಬ್ಬ ಶಾಸಕ ಮಾತ್ರ ಉಳಿದುಕೊಂಡಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

13 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

13 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

14 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

15 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

15 hours ago