Featured

ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಯುವಕನನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದ ಚೀನಾ ಸೇನೆ – Vishwanews24

ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಯುವಕನನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದ ಚೀನಾ ಸೇನೆ – Vishwanews24

ನವದೆಹಲಿ: ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಮಿರಾಮ್ ಟ್ಯಾರೋನ್ ನನ್ನು ಚೀನಾ ಸೇನೆ ಭಾರತೀಯ ಸೇನೆಗೆ ಹಸ್ತಾಂತರಿಸಿದೆ.

ಯುವಕನ ಹಸ್ತಾಂತರ ಕುರಿತಂತೆ ಕೇಂದ್ರ ಸಚಿವ ಕಿರಣ್ ರಿಜಿಜು ಈ ಮಾಹಿತಿ ನೀಡಿದ್ದಾರೆ. ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಅರುಣಾಚಲ ಪ್ರದೇಶದ ಯುವಕ ಮಿರಾಮ್ ಟ್ಯಾರೋನ್ ಅವರನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ವೈದ್ಯಕೀಯ ಪರೀಕ್ಷೆ ಸೇರಿದಂತೆ ಸೂಕ್ತ ಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :

ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಭಾರತೀಯ ಸೇನೆಯು ಹಾಟ್‌ಲೈನ್‌ನಲ್ಲಿ ಚೀನಾ ಸೇನೆ ಜೊತೆಗೆ ಮಾತನಾಡಿದ್ದು, ಮಿರಾಮ್ ಟ್ಯಾರನ್ ಅವರನ್ನು ಶೀಘ್ರದಲ್ಲೇ ವಾಪಸ್ ಕಳುಹಿಸುವಂತೆ ಕೇಳಿತ್ತು. ಈಗ ನಮ್ಮ ಹುಡುಗ ಹಿಂತಿರುಗಿರುವುದು ನಮಗೆ ಸಂತೋಷ ತಂದಿದೆ ಎಂದು ಹೇಳಿದರು.

ಜನವರಿ 18 ರಂದು, ಮಿರಾಮ್ ಟ್ಯಾರೋನ್ ಅಪಹರಣದ ವರದಿಗಳು ಬೆಳಕಿಗೆ ಬಂದವು, ನಂತರ ಭಾರತೀಯ ಸೇನೆಯು ಪಿಎಲ್‌ಎ ಅನ್ನು ಸಂಪರ್ಕಿಸಿತು. ಶಿಯುಂಗ್ ಲಾ ಬಿಶಿಂಗ್ ಪ್ರದೇಶದಿಂದ ಬೇಟೆಯಾಡಲು ಹೊರಟಿದ್ದ ಮಿರಾಮ್ ಟ್ಯಾರೋನ್ ನಾಪತ್ತೆಯಾಗಿದ್ದಾನೆ ಎಂದು ಭಾರತೀಯ ಸೇನೆ ತಿಳಿಸಿತ್ತು. ಆತ ದಾರಿ ತಪ್ಪಿದ್ದರೆ ಅಥವಾ ತಮ್ಮ ವಶದಲ್ಲಿದ್ದರೆ, ಆತನನ್ನು ಪತ್ತೆ ಹಚ್ಚಿ ಭಾರತಕ್ಕೆ ತಕ್ಷಣ ಒಪ್ಪಿಸುವಂತೆ ಭಾರತೀಯ ಸೇನೆ ಚೀನಾ ಸೇನೆಗೆ ತಿಳಿಸಿತ್ತು.

ಇದನ್ನೂ ಓದಿ :

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

9 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

11 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

11 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

11 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

12 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

12 hours ago