ನವದೆಹಲಿ: ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಮಿರಾಮ್ ಟ್ಯಾರೋನ್ ನನ್ನು ಚೀನಾ ಸೇನೆ ಭಾರತೀಯ ಸೇನೆಗೆ ಹಸ್ತಾಂತರಿಸಿದೆ.
ಯುವಕನ ಹಸ್ತಾಂತರ ಕುರಿತಂತೆ ಕೇಂದ್ರ ಸಚಿವ ಕಿರಣ್ ರಿಜಿಜು ಈ ಮಾಹಿತಿ ನೀಡಿದ್ದಾರೆ. ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಅರುಣಾಚಲ ಪ್ರದೇಶದ ಯುವಕ ಮಿರಾಮ್ ಟ್ಯಾರೋನ್ ಅವರನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ವೈದ್ಯಕೀಯ ಪರೀಕ್ಷೆ ಸೇರಿದಂತೆ ಸೂಕ್ತ ಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ :
ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಭಾರತೀಯ ಸೇನೆಯು ಹಾಟ್‌ಲೈನ್‌ನಲ್ಲಿ ಚೀನಾ ಸೇನೆ ಜೊತೆಗೆ ಮಾತನಾಡಿದ್ದು, ಮಿರಾಮ್ ಟ್ಯಾರನ್ ಅವರನ್ನು ಶೀಘ್ರದಲ್ಲೇ ವಾಪಸ್ ಕಳುಹಿಸುವಂತೆ ಕೇಳಿತ್ತು. ಈಗ ನಮ್ಮ ಹುಡುಗ ಹಿಂತಿರುಗಿರುವುದು ನಮಗೆ ಸಂತೋಷ ತಂದಿದೆ ಎಂದು ಹೇಳಿದರು.
ಜನವರಿ 18 ರಂದು, ಮಿರಾಮ್ ಟ್ಯಾರೋನ್ ಅಪಹರಣದ ವರದಿಗಳು ಬೆಳಕಿಗೆ ಬಂದವು, ನಂತರ ಭಾರತೀಯ ಸೇನೆಯು ಪಿಎಲ್‌ಎ ಅನ್ನು ಸಂಪರ್ಕಿಸಿತು. ಶಿಯುಂಗ್ ಲಾ ಬಿಶಿಂಗ್ ಪ್ರದೇಶದಿಂದ ಬೇಟೆಯಾಡಲು ಹೊರಟಿದ್ದ ಮಿರಾಮ್ ಟ್ಯಾರೋನ್ ನಾಪತ್ತೆಯಾಗಿದ್ದಾನೆ ಎಂದು ಭಾರತೀಯ ಸೇನೆ ತಿಳಿಸಿತ್ತು. ಆತ ದಾರಿ ತಪ್ಪಿದ್ದರೆ ಅಥವಾ ತಮ್ಮ ವಶದಲ್ಲಿದ್ದರೆ, ಆತನನ್ನು ಪತ್ತೆ ಹಚ್ಚಿ ಭಾರತಕ್ಕೆ ತಕ್ಷಣ ಒಪ್ಪಿಸುವಂತೆ ಭಾರತೀಯ ಸೇನೆ ಚೀನಾ ಸೇನೆಗೆ ತಿಳಿಸಿತ್ತು.
ಇದನ್ನೂ ಓದಿ :
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…