Featured

ಅರುಣಾಚಲ ಪ್ರದೇಶ : ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಕಾಂಗ್ರೆಸ್, ಎನ್‌ಪಿಪಿಯ ನಾಲ್ವರು ಶಾಸಕರು – Vishwanews24

ಅರುಣಾಚಲ ಪ್ರದೇಶ : ಚುನಾವಣೆಗೂ ಮುನ್ನ ಬಿಜೆಪಿ ಸೇರಿದ ಕಾಂಗ್ರೆಸ್, ಎನ್‌ಪಿಪಿಯ ನಾಲ್ವರು ಶಾಸಕರು

ಇಟಾನಗರ: ಲೋಕಸಭಾ ಚುನಾವಣೆ ಜೊತೆಗೆ ಅರುಣಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯೂ ನಡೆಯಬೇಕಿದೆ. ಈ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಪಕ್ಷದ ಇಬ್ಬರು ಶಾಸಕರು ಬಿಜೆಪಿಗೆ  ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ನ್ಯಾಷನಲ್ ಪೀಪಲ್ಸ್ ಪಾರ್ಟಿ  ಇಬ್ಬರು ಶಾಸಕರು ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಭಾನುವಾರ ಈ ನಾಲ್ವರು ಶಾಸಕರು ಮುಖ್ಯಮಂತ್ರಿ ಪೆಮಾಖಂಡು ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿಕೊಂಡರು. ಇಟಾನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ವಿರೋಧ ಪಕ್ಷದ ಕಾಂಗ್ರೆಸ್ ಶಾಸಕರಾದ ನಿನೋಂಗ್ ಎರಿಂಗ್ ಮತ್ತು ವಾಂಗ್ಲಿಂಗ್ ಲೋವಾಂಗ್‌ಡಾಂಗ್ ಮತ್ತು ಎನ್‌ಪಿಪಿ ಶಾಸಕರಾದ ಮುಚ್ಚು ಮಿಥಿ ಮತ್ತು ಗೋಕರ್ ಬಸಾರ್ ಅವರು ಬಿಜೆಪಿಗೆ ಸೇರ್ಪಡೆಗೊಂಡರು.

ಈ ಸಮಾರಂಭದಲ್ಲಿ ಮುಖ್ಯಮಂತ್ರಿಗಳಲ್ಲದೆ, ಅಸ್ಸಾಂ ಸಚಿವರು ಮತ್ತು ಅರುಣಾಚಲ ಪ್ರದೇಶದ ಬಿಜೆಪಿಯ ಚುನಾವಣಾ ಉಸ್ತುವಾರಿ ಅಶೋಕ್ ಸಿಂಘಾಲ್ ಮತ್ತು ರಾಜ್ಯಾಧ್ಯಕ್ಷ ಬಿಯುರಾಮ್ ವಾಹ್ಗೆ ಉಪಸ್ಥಿತರಿದ್ದರು. ಒಟ್ಟಿನಲ್ಲಿ 60 ಸದಸ್ಯ ಬಲದ ಅರುಣಾಚಲ ಪ್ರದೇಶ ವಿಧಾನಸಭೆಗೆ ಲೋಕಸಭಾ ಚುನಾವಣೆ ಜೊತೆಗೆ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಅದೇ ಸಮಯದಲ್ಲಿ ನಾಲ್ವರು ಶಾಸಕರು ಪಕ್ಷಕ್ಕೆ ಸೇರಿರುವುದು ಕುತೂಹಲಕ್ಕೆ ಕಾರಣವಾಗಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

4 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

5 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

5 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

8 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

8 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

9 hours ago