ಪುತ್ತೂರು: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಪುತ್ತಿಲ ಅವರ ಗಡಿಪಾರು ನೋಟೀಸ್ ಗೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆ ನಡೆಸಿದ ಪುತ್ತೂರು ಉಪವಿಭಾಗ ಅಧಿಕಾರಿಗಳ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದೆ.
ಅರುಣ್ ಕುಮಾರ್ ಪುತ್ತಿಲ ಅವರನ್ನು ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ನೋಟಿಸ್ ನೀಡಿ ಜೂನ್ 6ರಂದು ಪುತ್ತೂರು ಉಪ ವಿಭಾಗಾಧಿಕಾರಿ ಮುಂದೆ ಈ ಬಗ್ಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಇದರಂತೆ, ಅರುಣ್ ಪುತ್ತಿಲ ಪರವಾಗಿ ವಕೀಲ ನರಸಿಂಹ ಪ್ರಸಾದ್ ಹಾಜರಾಗಿ ವಾದ ಮಂಡಿಸಿದ್ದರು.
ಉಪವಿಭಾಗ ಅಧಿಕಾರಿಗಳ ನ್ಯಾಯಾಲಯದ ವಿಚಾರಣೆ ಸಂದರ್ಭದಲ್ಲಿ ಪೊಲೀಸರು ಹಾಜರಿದ್ದರೂ, ಸಮರ್ಪಕ ದಾಖಲೆಗಳನ್ನು ಒದಗಿಸದ ಕಾರಣ ಉಪ ವಿಭಾಗಾಧಿಕಾರಿ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ್ದು, ಪೊಲೀಸರು ಸಮರ್ಪಕ ದಾಖಲೆ ಒದಗಿಸುವಂತೆ ಆದೇಶ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಇದೇ ವೇಳೆ, ಇಂದು ಪುತ್ತೂರು ಉಪವಿಭಾಗದ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ನೋಟಿಸ್ ಪಡೆದ 9 ಮಂದಿ ವಿಚಾರಣೆಗೆ ಹಾಜರಾಗಿದ್ದರು. ವಾರದ ಹಿಂದೆ ನೀಡಿದ್ದ ನೋಟೀಸಿನಲ್ಲಿ ತಾವು ಖುದ್ದಾಗಿ ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರಿಂದ ಅರುಣ್ ಪುತ್ತಿಲ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…