ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ
ಮಂಗಳೂರು : ಅರೆಂಜ್ ಅಲರ್ಟ್ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಶುಕ್ರವಾರದಂದು ( ಜು.3) ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಅರೆಂಜ್ ಅಲರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಜುಲೈ ೩ ರಂದು ಜಿಲ್ಲೆಯ .ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿಗೆ ( ಪಿಯು) ರಜೆ ಘೋಷಿಸಲಾಗಿದೆ.
ಹೀಗಾಗಿ ಜಿಲ್ಲಾಡಳಿತದ ಆದೇಶದ ವಿರುದ್ಧವಾಗಿ ತರಗತಿಗಳನ್ನು ನಡೆಸಿರುವುದು ಕಂಡುಬಂದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆ ಹೊರಡಿಸಲಾಗಿದೆ.
