ಪುಣೆ: ಭಾರತೀಯ ಸಂಸ್ಕೃತಿಯಂತೆ ವಸ್ತ್ರ ಧರಿಸಿ ಬರಬೇಕೆಂದು ಶಿರಡಿ ಸಾಯಿಬಾಬಾ ದೇವಾಲಯ ಟ್ರಸ್ಟ್ ಬೋರ್ಡ್ ಹಾಕಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಆಕ್ರೋಶ ವ್ಯಕ್ತ ಪಡಿಸಿದ್ದು ಅರ್ಚಕರಿಗಿಲ್ಲದ ವಸ್ತ್ರ ಸಂಹಿತೆ ಭಕ್ತರಿಗೆ ಯಾಕೆ ಎಂದಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ತೃಪ್ತಿ ದೇಸಾಯಿ ಶಿರಡಿ ದೇವಾಲಯ ಇಂತಹ ಬೋರ್ಡ್ ಗಳನ್ನು ಹಾಕುವ ಮೂಲಕ ಭಕ್ತರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿದೆ . ದೇವಾಲಯ ಟ್ರಸ್ಟ್ ಈ ಫಲಕಗಳನ್ನು ತೆಗೆಯದಿದ್ದರೇ ನಾವೇ ಶಿರಡಿಗೆ ಹೋಗಿ ಫಲಕಗಳನ್ನು ತೆಗೆದು ಹಾಕುವುದಾಗಿ ತಿಳಿಸಿದ್ದಾರೆ.
ದೇವಾಲಯಗಳ ಅರ್ಚಕರು ಮತ್ತು ಪೂಜಾರಿಗಳು ಅರ್ಧ ಬಟ್ಟೆ ಧರಿಸಿರುತ್ತಾರೆ, ಅವರಿಗಿಲ್ಲದ ವಸ್ತ್ರ ಸಂಹಿತೆ ಕೇವಲ ಭಕ್ತರಿಗೆ ಮಾತ್ರ ಏಕೆ ಎಂದು ಪ್ರಶ್ನಿಸಿದ್ದಾರೆ.ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಶಿರಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ನ ಸಿಇಓ, ಇದೊಂದು ಮನವಿ ಅಷ್ಟೇ, ದೇವಾಲಯಕ್ಕೆ ಬರುವವರಿಗೆ ಯಾವುದೇ ವಸ್ತ್ರ ಸಂಹಿತೆ ನಿಗದಿ ಪಡಿಸಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಅವನಿಗಿಷ್ಟವಾದ ವಸ್ತ್ರ ಧರಿಸುವ ಹಕ್ಕು ನೀಡಿದೆ ಎಂದು ತೃಪ್ತಿ ದೇಸಾಯಿ ತಿಳಿಸಿದ್ದಾರೆ
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…