Featured

ಅರ್ಚನಾ ರೆಡ್ಡಿ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಪತಿ ಹಾಗೂ ಮಗಳು :  7 ಮಂದಿ ಅರೆಸ್ಟ್ – Vishwanews24

ಅರ್ಚನಾ ರೆಡ್ಡಿ ಕೊಲೆ ಪ್ರಕರಣದ ಮಾಸ್ಟರ್ ಮೈಂಡ್ ಪತಿ ಹಾಗೂ ಮಗಳು :  7 ಮಂದಿ ಅರೆಸ್ಟ್ – Vishwanews24

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ಹೊಸೂರು ರಸ್ತೆ ಬಳಿ ಡಿ.೨೭ ರಂದು ಇನ್ನೋವಾ ಕಾರಿನಲ್ಲಿ ಅರ್ಚನಾ ಎಂಬ ಮಹಿಳೆ ಬರುತ್ತಿದ್ದಾಗ ಕಾರನ್ನ ಅಡ್ಡಗಟ್ಟಿ‌ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ

ಸಿಸಿ ಟಿವಿ ಆಧಾರದ ಮೇಲೆ ಈ ಕೊಲೆ ಪ್ರಕರಣ ತನಿಖೆ‌ ಕೈಗೊಳ್ಳಲಾಗಿತ್ತು, ತನಿಖೆಯಲ್ಲಿ ಮುಖ್ಯವಾದ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆಯ ಸಂಪೂರ್ಣ ಮಾಹಿತಿ‌ ಬೆಳಕಿಗೆ ಬಂದಿದೆ.ಅಸಲಿಗೆ ಇದೆಲ್ಲದರ ಮಾಸ್ಟರ್ ಮೈಂಡ್ ಪತಿ ಹಾಗೂ ಮಗಳೇ ಆಗಿದ್ದಾಳೆ.ಸದ್ಯ ಕೊಲೆ ಪ್ರಕರಣ ಸಂಬಂಧ ಇದೀಗ ಏಳು ಆರೋಪಿಗಳನ್ನ ಬಂಧಿಸಿದ್ದೇವೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಶಿ ಹೇಳಿಕೆ ನೀಡಿದ್ದಾರೆ.

ಆಸ್ತಿಯನ್ನ ಕಬಳಿಸಲು ಈ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ ಹಾಗೂ ಕೊಲೆ ಪ್ರಕರಣದಲ್ಲಿ ಕೃತ್ಯಕ್ಕೆ ಬಳಸಿದ್ದ ವಾಹನ ಹಾಗೂ ಮಾರಕಾಸ್ತ್ರಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ‌.

ಸದ್ಯ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಆರೋಪಿಗಳಾದ, ನವೀನ್ ಕುಮಾರ್( ಅರ್ಚನಾ ಮೂರನೆ ಪತಿ) , ನವೀನ್ ಸ್ನೇಹಿತರಾದ ಸಂತೋಷ್ , ಅನೂಪ್,ಆನಂದ್, ನರೇಂದ್ರ ಹಾಗೂ ಅರ್ಚನಾ ರೆಡ್ಡಿ ಮಗಳಾದ ದೀಪು ಬಂಧಿತ ಆರೋಪಿಗಳಾಗಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago