ಅರ್ಧ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸುವ ಪೊಲೀಸರಿಗೂ ಹಾಗೂ ಸವಾರರಿಗೂ ದಂಡ ವಿಧಿಸುವಂತೆ ಆದೇಶ -Vishwanews24
ಬೆಂಗಳೂರು: ದ್ವಿಚಕ್ರ ವಾಹನ ಚಲಾಯಿಸುವ ವೇಳೆ ಅವರು ಐಎಸ್‌ಐ ಪ್ರಮಾಣೀಕೃತ ಹೆಲ್ಮೆಟ್ ಧರಿಸಬೇಕು. ಆದರೆ, ಪೊಲೀಸರೇ ಮೋಟಾರು ಕಾಯಿದೆ ನಿಯಮದ ಉಲ್ಲಂಘನೆ ಮಾಡುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ನಿರ್ಧರಿಸಿದೆ.
“ವಾಹನ ಸವಾರರು ರಾಜ್ಯಾದ್ಯಂತ ಎಲ್ಲರೂ ಸ್ವಯಂಪ್ರೇರಿತವಾಗಿ ಕಾನೂನು ಪಾಲನೆ ಮಾಡಬೇಕು. ಅರ್ಧ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸುವ ಸವಾರರ ವಿರುದ್ಧವೂ ಕಡ್ಡಾಯವಾಗಿ ಕ್ರಮ ಜರುಗಿಸುವ ಬಗ್ಗೆ ಮತ್ತಷ್ಟು ನಿರ್ದೇಶನಗಳನ್ನು ನೀಡಲಾಗುತ್ತದೆ ಎಂದು ಅವರು ಹೇಳಿದರು.
ಈ ಹಿಂದೆ ಐಎಸ್‌ಐ ಗುರುತಿನ ಹೆಲ್ಮೆಟ್ ಕಡ್ಡಾಯ ನಿಯಮ ರಾಜ್ಯಾದ್ಯಂತ ಜಾರಿಯಾದರೂ ಭಿನ್ನ ಅಭಿ ಪ್ರಾಯಗಳು ಕೇಳಿಬಂದಿದ್ದವು. ಪೊಲೀಸ್ ಇಲಾಖೆಗೂ ತಾಂತ್ರಿಕ ಸಮಸ್ಯೆಗಳು ಉಂಟಾದವು. ಹೀಗಾಗಿ, ಪೂರ್ಣ ಪ್ರಮಾಣದ ಹೆಲ್ಮೆಟ್ ಕಡ್ಡಾಯ ಪಾಲನೆ ಹಳ್ಳ ಹಿಡಿದಿದೆ ಎಂದು ಹಿರಿಯ ಅಧಿಕಾರಿ ಹೇಳುತ್ತಾರೆ.
ಬೆಂಗಳೂರು ನಗರ ಸಂಚಾರ ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.ಬಿ.ಆರ್ ರವಿಕಾಂತೇಗೌಡ ಅವರು, ಅರ್ಧ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸುವ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧವೂ ಮೋಟಾರು ಕಾಯಿದೆ ಅನ್ವಯ ಪ್ರಕರಣ ದಾಖಲಿಸಿ ದಂಡ ವಿಧಿಸುವಂತೆ ಸೂಚಿಸಿ ನಗರ ಸಂಚಾರ ಪೊಲೀಸರಿಗೆ ಆದೇಶಿಸಿದ್ದಾರೆ.
ಅರ್ಧ ಹೆಲ್ಮೆಟ್ ಧರಿಸುವವರಲ್ಲಿ ಪೊಲೀಸರು ಸೇರಿದ್ದಾರೆ. ಹೀಗಾಗಿ ಮೊದಲು ಇಲಾಖೆಯವರಿಗೆ ಅರಿವು ಮೂಡಿಸಬೇಕಿದೆ. ಆನಂತರ ಸಾರ್ವಜನಿಕರಿಗೆ ಹೇಳಬೇಕಿದೆ. ಈಗ ಟೋಪಿ ಆಕಾರದ ಹೆಲ್ಮೆಟ್ ಧರಿಸುವ ಪೊಲೀಸರು ಕಂಡು ಬಂದರೆ ತಕ್ಷಣವೇ ಕಾನೂನು ಕ್ರಮ ಜರುಗಿಸಲಾಗುತ್ತದೆ. ಇದರಲ್ಲಿ ಯಾವುದೇ ಮುಲಾಜು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
