Featured

ಅರ್ಹತೆ ಇಲ್ಲದವರನ್ನು ನಾಯಕರನ್ನಾಗಿ ಮಾಡಬಾರದು : ವೀರಪ್ಪ ಮೊಯಿಲಿ  – Vishwanews24

ಅರ್ಹತೆ ಇಲ್ಲದವರನ್ನು ನಾಯಕರನ್ನಾಗಿ ಮಾಡಬಾರದು : ವೀರಪ್ಪ ಮೊಯಿಲಿ

ಪಕ್ಷದಲ್ಲಿರುವ ಮುಖಂಡರ ಕುರಿತು ವರಿಷ್ಠರು ಸಮರ್ಪಕ ಮೌಲ್ಯಮಾಪನ ಮಾಡುವುದು ಅಗತ್ಯ..

ನವದೆಹಲಿ: ‘ಪಕ್ಷದಲ್ಲಿ ಮುಖಂಡರಿಗೆ ಪ್ರಮುಖ ಹುದ್ದೆ, ಜವಾಬ್ದಾರಿಯನ್ನು ನೀಡುವ ವೇಳೆ ಪಕ್ಷದ ತತ್ವ–ಸಿದ್ಧಾಂತದ ಬಗ್ಗೆ ಅವರಲ್ಲಿನ ಬದ್ಧತೆಯನ್ನು ಪರಿಶೀಲಿಸಬೇಕು’ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಎಂ.ವೀರಪ್ಪ ಮೊಯಿಲಿ ಗುರುವಾರ ಹೇಳಿದ್ದಾರೆ.

ಜಿತಿನ್ ಪ್ರಸಾದ್ ಅವರು ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮರುದಿನವೇ ಮೊಯಿಲಿ ಅವರಿಂದ ಈ ಅಭಿಪ್ರಾಯ ಹೊರಬಿದ್ದಿದೆ.

‘ಕಾಂಗ್ರೆಸ್‌ ಪಕ್ಷಕ್ಕೆ ‘ದೊಡ್ಡ ಶಸ್ತ್ರಚಿಕಿತ್ಸೆ’ಯ ಅಗತ್ಯವಿದೆ. ಕೇವಲ ವಂಶಪಾರಂಪರ್ಯವನ್ನು ಪರಿಗಣಿಸಿ ಮುಖಂಡರಿಗೆ ಮಣೆ ಹಾಕುವುದನ್ನು ನಿಲ್ಲಿಸಬೇಕು’ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

‘ಜಿತಿನ್‌ ಪ್ರಸಾದ್‌ ನೇತೃತ್ವದಲ್ಲಿಯೇ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯನ್ನು ಎದುರಿಸಲಾಯಿತು. ಪಕ್ಷಕ್ಕೆ ಒಂದೇ ಒಂದು ಸ್ಥಾನ ಸಿಗಲಿಲ್ಲ. ಅವರು ಅಸಮರ್ಥರು ಎಂಬುದನ್ನು ಇದು ಸಾಬೀತುಪಡಿಸಿತ್ತು’ ಎಂದು ಹೇಳಿದ್ದಾರೆ.

‘ಜಿತಿನ್‌ ಪ್ರಸಾದ್‌ ಅವರಿಗೆ ಪಕ್ಷಕ್ಕಿಂತ ವೈಯಕ್ತಿಕ ಮಹತ್ವಾಕಾಂಕ್ಷೆಯೇ ಮುಖ್ಯವಾಗಿತ್ತು. ಪಕ್ಷದ ತತ್ವ–ಸಿದ್ಧಾಂತದ ಬಗೆಗಿನ ಇವರ ಬದ್ಧತೆ ಬಗ್ಗೆ ಮೊದಲಿನಿಂದಲೂ ಸಂಶಯ ಇತ್ತು’ ಎಂದೂ ಆರೋಪಿಸಿದರು.

‘ಅರ್ಹತೆ ಇಲ್ಲದವರನ್ನು ನಾಯಕರನ್ನಾಗಿ ಮಾಡಬಾರದು. ಪಕ್ಷದಲ್ಲಿರುವ ಮುಖಂಡರ ಕುರಿತು ವರಿಷ್ಠರು ಸಮರ್ಪಕ ಮೌಲ್ಯಮಾಪನ ಮಾಡುವುದು ಅಗತ್ಯ. ಪಕ್ಷದ ಮರುಸಂಘಟನೆಯಾಗಬೇಕು. ಪ್ರಮುಖ ಹುದ್ದೆಗಳಲ್ಲಿ ಸಮರ್ಥರನ್ನೇ ನೇಮಕ ಮಾಡಬೇಕು. ಪಕ್ಷವು ಆತ್ಮಾವಲೋಕನ ನಡೆಸಬೇಕು. ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಈ ಬೆಳವಣಿಗೆ ಒಂದು ಪಾಠವಾಗಬೇಕು’ ’ ಎಂದೂ ಮೊಯಿಲಿ ಪ್ರತಿಪಾದಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago