ಕಾಂತಾರ ಚಿತ್ರ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಗಳಿಸಿದೆ. ದೈವಾರಾಧನೆ ಕುರಿತು ಚಿತ್ರದಲ್ಲಿ ಅದ್ಬುತವಾಗಿ ತೋರಿಸಲಾಗಿದೆ. ಈ ಸಿನಿಮಾ ಸಕ್ಸಸ್ ಆದ ಬಳಿಕ ಗುಳಿಗ ಆಚರಣೆಗಳು ಹೆಚ್ಚು ಪ್ರಚಲಿತವಾಗಿದೆ.
ಇದೀಗ ಕೆಲವರು ಇದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ದೈವದ ಹೆಸರಲ್ಲಿ ಅನೇಕರು ಹಣ ಮಾಡಲು ಹೊರಟಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳು ಕೆಲವೊಂದು ಪೋಸ್ಟ್ಗಳು ಹರಿದಾಡುತ್ತಿದೆ. ಅಂಥವರಿಗೆ ತುಳುನಾಡ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, ಮೈಸೂರು ಭಾಗದ ಜನರು ದೈವನಂಬಿಕೆಗಳನ್ನು ಮುರಿದು, ಪ್ರಚಾರಕ್ಕಾಗಿ, ದುಡ್ಡು ಮಾಡುವುದಕ್ಕಾಗಿ ಅಲ್ಲಲ್ಲಿ ದೈವದ ಕಟ್ಟೆಗಳನ್ನು ಸ್ಥಾಪಿಸಿ ಗೂಗಲ್ ಪೇ ಮಾಡಿ, ಫೋನ್ ಪೇ ಮಾಡಿ ಎನ್ನುತ್ತಿದ್ದಾರೆ.
ದುಡ್ಡು ಸಿಗುತ್ತದೆ ಎಂಬ ಕಾರಣಕ್ಕಾಗಿ ಅಲ್ಲಿ ಹೋಗಿ ನೇಮ ಕಟ್ಟುವವರಿಗೆ, ತಾಸೆ ಬ್ಯಾಂಡ್ ಸೆಟ್ನವರಿಗೆ, ಮಧ್ಯಸ್ಥ, ಮುಕ್ಕಾಲ್ದಿ ಹಾಗೂ ಯಾರೆಲ್ಲ ಇಲ್ಲಿ ತೊಡಗಿಸಿಕೊಳ್ಳುತ್ತಾರೆಯೋ ಅವರೆಲ್ಲರಿಗೂ ಮುಂದೆ ನಮ್ಮ ಊರಿನ ಯಾವುದೇ ದೈವಸ್ಥಾನ, ಮನೆಗಳಲ್ಲಿ ನೇಮದ ಕೊಡಿಯಡಿಯಲ್ಲಿ ಅವಕಾಶ ನೀಡುವುದಿಲ್ಲ.
ತುಳುನಾಡ ದೈವಾರಾಧಕರು ಎಚ್ಚರಿಕೆ ನೀಡಿದ ಫೋಟೋ ಒಂದು ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದ್ರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ದೊರೆತಿಲ್ಲ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…