ಅಲ್-ಖೈದಾ ಜೊತೆ ನಂಟು ಹೊಂದಿದ್ದ ಜಾರ್ಖಂಡ್ ಮೂಲದ ಮಹಿಳೆ ಬೆಂಗಳೂರಿನಲ್ಲಿ ಬಂಧನ – vishwanews24
ಅಲ್-ಖೈದಾ ಜೊತೆ ನಂಟು ಹೊಂದಿದ್ದ ಜಾರ್ಖಂಡ್ ಮೂಲದ ಮಹಿಳೆ ಬೆಂಗಳೂರಿನಲ್ಲಿ ಬಂಧನ
ಬೆಂಗಳೂರು: ಅಲ್-ಖೈದಾ ಜೊತೆ ನಂಟು ಹೊಂದಿದ್ದ ಜಾರ್ಖಂಡ್ ಮೂಲದ ಮಹಿಳೆಯನ್ನು ಗುಜರಾತ್ ಎಟಿಎಸ್ ಬೆಂಗಳೂರಿನಲ್ಲಿ ಬಂಧಿಸಿದೆ.
ಹೆಬ್ಬಾಳ ಸಮೀಪದ ಮನೋರಾಯನಪಾಳ್ಯದಲ್ಲಿ ನೆಲೆಸಿದ್ದ ಶಮಾ ಪರ್ವೀನ್ ಬಂಧಿತ ಮಹಿಳೆ. ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಮೂಲವಾಧಿ ಸಂಘಟನೆಗಳ ಸಂಪರ್ಕ ಜಾಲಾಡಿದಾಗ ಪರ್ವೀನ್ ಬಗ್ಗೆ ಮಾಹಿತಿ ದೊರೆತಿದೆ. ಈ ಸುಳಿವು ಆಧರಿಸಿ ಕಾರ್ಯಾಚರಣೆ ನಡೆಸಿದ ಎಟಿಎಸ್ ಆಕೆಯನ್ನು ಬಂಧಿಸಿ, ಆಕೆಯ ಮನೆಯಲ್ಲಿದ್ದ ಲ್ಯಾಪ್ಟಾಪ್ ಸೇರಿ ಕೆಲ ದಾಖಲೆಗಳನ್ನು ವಶಪಡಿಸಿಕೊಂಡಿದೆ.
ಉಡುಪಿ: ರಾಜ್ಯದಲ್ಲಿ ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಯಶ್ಪಾಲ್ ಸುವರ್ಣ ಮನವಿ – vishwanews24
ಬಂಧನದ ಬಳಿಕ ಮಹಿಳೆಯನ್ನು ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ವರ್ಗಾವಣೆ ಪ್ರಮಾಣ ಪತ್ರ ಪಡೆದು ಗುಜರಾತ್ಗೆ ಕರೆದೊಯ್ಯಲಾಗಿದೆ.
ಕೆಲ ದಿನಗಳ ಹಿಂದೆ ಅಲ್-ಖೈದಾ ಗ್ಯಾಂಗ್ವೊಂದನ್ನು ಗುಜರಾತ್ ಎಟಿಎಸ್ ಪತ್ತೆಹಚ್ಚಿತ್ತು. ಈ ಗ್ಯಾಂಗ್ನ ಸಂಪರ್ಕ ಜಾಲವನ್ನು ಹುಡುಕಾಡಿದಾಗ ಪರ್ವೀನ್ ಬಗ್ಗೆ ಮಾಹಿತಿ ದೊರೆತಿದೆ. ಬಳಿಕ ಆಕೆಯ ಮನೆಗೆ ದಾಳಿ ನಡೆಸಿ ಮಂಗಳವಾರ ಬಂಧಿಸಲಾಯಿತು. ಅಲ್-ಖೈದಾ ಜೊತೆ ಮಹಿಳೆ ನಂಟು ಹೊಂದಿರುವುದು ತನಿಖೆಯಲ್ಲಿ ಸಾಬೀತಾಗಿದೆ.
