Featured

ಅಲ್-ಖೈದಾ ಜೊತೆ ನಂಟು ಹೊಂದಿದ್ದ ಜಾರ್ಖಂಡ್ ಮೂಲದ ಮಹಿಳೆ ಬೆಂಗಳೂರಿನಲ್ಲಿ ಬಂಧನ – vishwanews24

ಅಲ್-ಖೈದಾ  ಜೊತೆ ನಂಟು ಹೊಂದಿದ್ದ ಜಾರ್ಖಂಡ್ ಮೂಲದ ಮಹಿಳೆ ಬೆಂಗಳೂರಿನಲ್ಲಿ ಬಂಧನ

ಬೆಂಗಳೂರು: ಅಲ್-ಖೈದಾ  ಜೊತೆ ನಂಟು ಹೊಂದಿದ್ದ ಜಾರ್ಖಂಡ್ ಮೂಲದ ಮಹಿಳೆಯನ್ನು ಗುಜರಾತ್ ಎಟಿಎಸ್  ಬೆಂಗಳೂರಿನಲ್ಲಿ ಬಂಧಿಸಿದೆ.

ಹೆಬ್ಬಾಳ  ಸಮೀಪದ ಮನೋರಾಯನಪಾಳ್ಯದಲ್ಲಿ ನೆಲೆಸಿದ್ದ ಶಮಾ ಪರ್ವೀನ್ ಬಂಧಿತ ಮಹಿಳೆ. ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಮೂಲವಾಧಿ ಸಂಘಟನೆಗಳ ಸಂಪರ್ಕ ಜಾಲಾಡಿದಾಗ ಪರ್ವೀನ್ ಬಗ್ಗೆ ಮಾಹಿತಿ ದೊರೆತಿದೆ. ಈ ಸುಳಿವು ಆಧರಿಸಿ ಕಾರ್ಯಾಚರಣೆ ನಡೆಸಿದ ಎಟಿಎಸ್ ಆಕೆಯನ್ನು ಬಂಧಿಸಿ, ಆಕೆಯ ಮನೆಯಲ್ಲಿದ್ದ ಲ್ಯಾಪ್‌ಟಾಪ್ ಸೇರಿ ಕೆಲ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಬಂಧನದ ಬಳಿಕ ಮಹಿಳೆಯನ್ನು ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ವರ್ಗಾವಣೆ ಪ್ರಮಾಣ ಪತ್ರ ಪಡೆದು ಗುಜರಾತ್‌ಗೆ ಕರೆದೊಯ್ಯಲಾಗಿದೆ.

ಕೆಲ ದಿನಗಳ ಹಿಂದೆ ಅಲ್-ಖೈದಾ ಗ್ಯಾಂಗ್‌ವೊಂದನ್ನು ಗುಜರಾತ್ ಎಟಿಎಸ್ ಪತ್ತೆಹಚ್ಚಿತ್ತು. ಈ ಗ್ಯಾಂಗ್‌ನ ಸಂಪರ್ಕ ಜಾಲವನ್ನು ಹುಡುಕಾಡಿದಾಗ ಪರ್ವೀನ್ ಬಗ್ಗೆ ಮಾಹಿತಿ ದೊರೆತಿದೆ. ಬಳಿಕ ಆಕೆಯ ಮನೆಗೆ ದಾಳಿ ನಡೆಸಿ ಮಂಗಳವಾರ ಬಂಧಿಸಲಾಯಿತು. ಅಲ್-ಖೈದಾ ಜೊತೆ ಮಹಿಳೆ ನಂಟು ಹೊಂದಿರುವುದು ತನಿಖೆಯಲ್ಲಿ ಸಾಬೀತಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago