Featured

ಅವತ್ತು ಗೋಕಾಕ್ ಚಳವಳಿ; ಇವತ್ತು ಕುಪ್ಪಳ್ಳಿ ಕಹಳೆ : ಹಂಸಲೇಖ -Vishwanews24

ಪಠ್ಯಕ್ರಮ ಪರಿಷ್ಕರಣೆ ಹಾಗೂ ರಾಷ್ಟ್ರಕವಿ ಕುವೆಂಪುಗೆ ಅಪಮಾನ ಖಂಡಿಸಿ  ಕವಿಶೈಲದಿಂದ ತೀರ್ಥಹಳ್ಳಿಗೆ ಕಾಲ್ನಡಿಗೆ..

ಕನ್ನಡದ ನಡ (ಸೊಂಟ) ಮುರಿಯುವ ನಡೆ ಕನ್ನಡ ನಾಡಿನಲ್ಲಿ ಶುರುವಾಗಿದೆ..

ಕನ್ನಡ ಪಕ್ಷದ ಹೋರಾಟದ ಹಾದಿ ಇಲ್ಲಿಂದಲೇ ಶುರು..

ಬಸವ ಅಂದರೆ ಕರುನಾಡು. ಕುವೆಂಪು ಅಂದರೆ ಕರ್ನಾಟಕ..

ಈ ಎರಡಕ್ಕೂ ಅಪಮಾನ ಆದ ಮೇಲೆ ನಾವು ಇಲ್ಲಿದ್ದು ಏನು ಮಾಡುವುದು..

ಶಿವಮೊಗ್ಗ: ಕನ್ನಡದ ನಡ (ಸೊಂಟ) ಮುರಿಯುವ ನಡೆ ಕನ್ನಡ ನಾಡಿನಲ್ಲಿ ಶುರುವಾಗಿದೆ. ನಾವು ಭಾಷಾಂಧರೂ ಅಂದರೂ ಸರಿ ಈ ನಡೆಯ ವಿರುದ್ಧ ತಮಿಳರನ್ನು ಅನುಸರಿಸಿ ಹೋರಾಟ ಸಂಘಟಿಸಬೇಕಿದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.

ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಠ್ಯಕ್ರಮ ಪರಿಷ್ಕರಣೆ ಹಾಗೂ ರಾಷ್ಟ್ರಕವಿ ಕುವೆಂಪುಗೆ ಅಪಮಾನ ಖಂಡಿಸಿ ಬುಧವಾರ ಕುಪ್ಪಳ್ಳಿಯ ಕವಿಶೈಲದಿಂದ ತೀರ್ಥಹಳ್ಳಿಗೆ ಆರಂಭವಾದ ಪಾದಯಾತ್ರೆಯಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಅವರ ಭಾಷೆಗೆ ಕೊಂಚ ಯಡವಟ್ಟಾದರೂ ಸರಿ ಆಳುವವರು, ವಿರೋಧದವರು ಎಲ್ಲ ಒಟ್ಟಾಗಿ ಸೇರಿಬಿಡುತ್ತಾರೆ. ಇಲ್ಲಿಯೂ ನಮಗೆ ಈಗ ಪಕ್ಷ ಇಲ್ಲ. ಕವಿ ಪಕ್ಷ, ಕನ್ನಡ ಪಕ್ಷದ ಹೋರಾಟದ ಹಾದಿ ಇಲ್ಲಿಂದಲೇ ಶುರುವಾಗಿದೆ ಎಂದರು.

ಬಸವ ಅಂದರೆ ಕನ್ನಡ. ಕುವೆಂಪು ಅಂದರೆ ಕನ್ನಡ. ಬಸವ ಅಂದರೆ ಕರುನಾಡು. ಕುವೆಂಪು ಅಂದರೆ ಕರ್ನಾಟಕ. ಈ ಎರಡಕ್ಕೂ ಅಪಮಾನ ಆದ ಮೇಲೆ ನಾವು ಇಲ್ಲಿದ್ದು ಏನು ಮಾಡುವುದು ಎಂದು ಪ್ರಶ್ನಿಸಿದ ಹಂಸಲೇಖ, ಅವತ್ತು ಗೋಕಾಕ್ ಚಳವಳಿ. ಇವತ್ತು ಕುಪ್ಪಳ್ಳಿ ಕಹಳೆ. ಇದು ನಾಡಿನಾದ್ಯಂತ ಮೊಳಗಲಿದೆ ಎಂದರು.

ನಮ್ಮ ನಾಡೇ ಒಂದು ಗೀತೆ. ನಮ್ಮ ನಾಡೆ ಒಂದು ಧ್ವಜ. ಅವೆರಡಕ್ಕೂ ಅಪಮಾನ ಆಗಿ ಕನ್ನಡಕ್ಕೆ ಕುತ್ತು ಬಂದ ಮೇಲೆ ಸುಮ್ಮನಿರುವುದು ಹೇಗೆ. ಕನ್ನಡಕ್ಕೆ ಮಹಾಮನೆ ಕಲ್ಯಾಣ. ಕವಿಶೈಲ ಗುರುಮನೆ. ಹೀಗಾಗಿ ಗುರುಮನೆಯಿಂದಲೇ ಹೋರಾಟದ ಕಹಳೆ ಊದುತ್ತಿದ್ದೇವೆ ಎಂದು ಹೇಳಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago