Featured

ಅವರ ಕ್ಷೇತ್ರದಲ್ಲಿ ಪ್ರಧಾನಿ  ಸಾಧನೆ ಬಗ್ಗೆ ಮಾತಾಡೋದನ್ನು ಅವರಿಂದ ಸಹಿಸೋಕೆ ಆಗುತ್ತಿಲ್ಲ : ಪ್ರಿಯಾಂಕ್ ಖರ್ಗೆ ವಿರುದ್ಧ ಸೂಲಿಬೆಲೆ ಆಕ್ರೋಶ – Vishwanews24

ಅವರ ಕ್ಷೇತ್ರದಲ್ಲಿ ಪ್ರಧಾನಿ  ಸಾಧನೆ ಬಗ್ಗೆ ಮಾತಾಡೋದನ್ನು ಅವರಿಂದ ಸಹಿಸೋಕೆ ಆಗುತ್ತಿಲ್ಲ : ಪ್ರಿಯಾಂಕ್ ಖರ್ಗೆ ವಿರುದ್ಧ ಸೂಲಿಬೆಲೆ ಆಕ್ರೋಶ

ಬೀದರ್: ನಮೋ ಭಾರತ್ ಕಾರ್ಯಕ್ರಮವನ್ನು ಅನೇಕ ಕಡೆ ತಡೆಯುವಂತಹ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಪ್ರಿಯಾಂಕ್ ಖರ್ಗೆ  ಕ್ಷೇತ್ರ ಚಿತ್ತಾಪುರದಲ್ಲಿ ಕಾರ್ಯಕ್ರಮ ತಡೆಯುವ ಕೆಲಸ ಆಗಿದ್ದು, ಅವರ ಕ್ಷೇತ್ರದಲ್ಲಿ ಪ್ರಧಾನಿ ಮೋದಿ  ಸಾಧನೆ ಬಗ್ಗೆ ಮಾತಾಡೋದನ್ನು ಅವರಿಂದ ಸಹಿಸೋಕೆ ಆಗುತ್ತಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ  ಕಿಡಿಕಾರಿದ್ದಾರೆ.

ಬೀದರ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಧಿಕಾರದ ಮದ, ಆತಂಕದಿಂದ ಚಿತ್ತಾಪುರದಲ್ಲಿ ಕಾರ್ಯಕ್ರಮ ನಡೆಯದಂತೆ ಪ್ಲ್ಯಾನ್ ಮಾಡಿದ್ದಾರೆ. ಬುಧವಾರ ತಡರಾತ್ರಿ ತಹಶೀಲ್ದಾರ್ ಕಡೆಯಿಂದ ಪತ್ರಕೊಟ್ಟು, ನಿಮ್ಮ ಕಾರ್ಯಕ್ರಮ ಕ್ಯಾನ್ಸಲ್ ಮಾಡಲಾಗಿದೆ ಎಂದು ಮಾಹಿತಿ ಕೊಟ್ಟಿದ್ದಾರೆ. ಬಳಿಕ ಜಿಲ್ಲೆಯ ಗಡಿಯಲ್ಲಿ ಯಾವ ಆದೇಶ ಇಲ್ಲದೇ ತಡೆಯುವ ಕೆಲಸ ಮಾಡಿದ್ದಾರೆ. ಮಧ್ಯರಾತ್ರಿವರೆಗೂ ಅಲ್ಲೇ ಇದ್ದು, ಆದೇಶ ಪ್ರತಿ ಕೊಡುವ ತನಕ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದೆ. ರಾತ್ರಿ 1 ಗಂಟೆಗೆ ಆದೇಶ ಪ್ರತಿ ಕೊಟ್ಟರು ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಕಾರ್ಯಕ್ರಮದ ಪರವಾನಿಗೆ, ಮೈಕ್ ಪರವಾನಗಿ ಕ್ಯಾನ್ಸಲ್ ಮಾಡಿ ಕಾಂಗ್ರೆಸ್  ನನಗೆ ವಿನಾಕಾರಣ ಕಿರುಕುಳ ನೀಡಿದೆ. ತುರ್ತಾಗಿ ಕಮಿಷನರ್ ಬಳಿ ಆದೇಶ ಪ್ರತಿ ತಂದು ಕಾರ್ಯಕ್ರಮ ಕ್ಯಾನ್ಸಲ್ ಮಾಡಿದ್ದಾರೆ. ಸರ್ಕಾರದ ಸೂತ್ರ ಹಿಡಿದ ಈ ಜನ ಪ್ರಜಾಪ್ರಭುತ್ವದ ಬಗ್ಗೆ ಮಾತಾಡಿ, ಸಂವಿಧಾನ ಉಳಿಸಿ ಎಂದು ಹೇಳುತ್ತಾರೆ. ಮತ್ತೊಂದೆಡೆ ವ್ಯಕ್ತಿಯೊಬ್ಬನ ಹಕ್ಕು ತಡೆಯುವ ಈ ಪ್ರಯತ್ನ ಮಾಡುತ್ತಾರೆ. ಈ ನಡೆ ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ನಾವು ಹಾಕಿದ ಒಂದು ಮತ ರಾಜ್ಯದಲ್ಲಿ ಇಂತಹ ಸರ್ಕಾರವನ್ನು ತಂದಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

41 minutes ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 hour ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 hours ago