ಮುಂಬೈ: ಅಶ್ಲೀಲ (ನೀಲಿ) ಚಲನಚಿತ್ರಗಳ ರಚನೆ ಮತ್ತು ಕೆಲ ಆ್ಯಪ್‌ಗಳ ಮೂಲಕ ಅವುಗಳ ಪ್ರಸರಣ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಸ್ಥಳೀಯ ನ್ಯಾಯಾಲಯ ಜುಲೈ 23ರವರೆಗೂ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
45 ವರ್ಷ ಹರೆಯದ ರಾಜ್ ಕುಂದ್ರಾ ವಿರುದ್ಧ ವಿವಿಧ ಐಪಿಸಿ ಸೆಕ್ಷನ್ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಾದ ನಂತರ ಸೋಮವಾರ ರಾತ್ರಿ ಮುಂಬೈನ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು. ಉದ್ಯಮಿ ಕುಂದ್ರಾ ಅಶ್ಲೀಲ ಚಲನಚಿತ್ರಗಳನ್ನು ತಯಾರಿಸಿ ಮಾರಾಟ ಮಾಡುವ ಮೂಲಕ ಆರ್ಥಿಕವಾಗಿ ಲಾಭ ಗಳಿಸುತ್ತಿದ್ದು, ಅವರ ಹೆಚ್ಚಿನ ವಿಚಾರಣೆಗಾಗಿ ಗರಿಷ್ಠ ಅವಧಿಗೆ ತಮ್ಮ ಕಸ್ಟಡಿಗೆ ನೀಡಬೇಕೆಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಪೊಲೀಸರು ತಿಳಿಸಿದರು.
ಕುಂದ್ರಾ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದು, ಅದರ ವಿಷಯಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆ ಮತ್ತು ಅವರ ವ್ಯವಹಾರ ಮತ್ತು ವಹಿವಾಟುಗಳನ್ನು ಸಹ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಂದ್ರಾ ಅವರಲ್ಲದೆ, ಮತ್ತೊಬ್ಬ ಆರೋಪಿ ರಿಯಾನ್ ಥೋರ್ಪ್ ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆತನನ್ನೂ ಜುಲೈ 23 ರವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…