ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

Featured, ರಾಜ್ಯ ನ್ಯೂಸ್

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ 

ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ ಬ್ಲ್ಯಾಕ್ ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ ಐಆರ್ ದಾಖಲಿಸುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪೊಲೀಸರಿಗೆ ಸೂಚಿಸಿದ್ದಾರೆ.

ಅನುಮತಿ ಇಲ್ಲದೆ, ಖಾಸಗಿ ಫೋಟೋಗಳು ಹಾಗೂ ವಿಡಿಯೋಗಳನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಅಥವಾ ಪ್ರಸಾರ ಮಾಡುವ ಪ್ರಕರಣಗಳಲ್ಲಿ ಮುಲಾಜಿಲ್ಲದೆ ಕಾನೂನು ಕ್ರಮಕೈಗೊಳ್ಳಬೇಕು. ಇಂತಹ ಪ್ರಕರಣಗಳು ಸಂಜ್ಞೆಯ ಅಪರಾಧವಾಗಿದ್ದು, ಸಾಮಾನ್ಯವಾಗಿ “ರಿವೆಂಜ್ ಪೋರ್ನೋಗ್ರಫಿ’, ‘ಸೆಕ್ಸ್ ಟಾರ್ಷನ್’ ಹಾಗೂ “ಬ್ಲ್ಯಾಕ್ ಮೇಲ್ ವಿಡಿಯೋ’ ಎಂದು ಕರೆಯಲ್ಪಡುವ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್‌ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ಇಂತಹ ಪ್ರಕರಣಗಳಲ್ಲಿ ಅನ್ವಯವಾಗುವಂತೆ ಬಿಎನ್ ಎಸ್ ಸೆಕ್ಷನ್ 77 ಹಾಗೂ ಐಟಿ ಕಾಯ್ದೆ ಸೆಕ್ಷನ್ 662, 67 ಮತ್ತು 67ಎ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಈ ಸ್ಥಾಯಿ ಆದೇಶವು, ವಿಡಿಯೋ ಅಥವಾ ಫೋಟೋ ದಾಖಲಿಸಲು ಹಿಂದೆ ಒಪ್ಪಿಗೆ ನೀಡಲಾಗಿತ್ತು ಎಂಬ ಕಾರಣವನ್ನು ಉಲ್ಲೇಖಿಸಿ ದೂರು ದಾಖಲಿಸಲು ನಿರಾಕರಿಸುವುದು ಅಥವಾ ವಿಳಂಬ ಮಾಡುವುದು ಮಾಡಬಾರದು ಎಂದು ತಿಳಿಸಿದೆ. ಬೆದರಿಕೆ, ಸುಲಿಗೆ, ಲೈಂಗಿಕ ಅನುಕೂಲತೆಗಳ ಬೇಡಿಕೆ ಅಥವಾ ಇತರೆ ಒತ್ತಡದ ಸಂದರ್ಭಗಳಲ್ಲಿ ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆಗಳಿಗೆ ಸಂಬಂಧಿಸಿದ ಹೆಚ್ಚುವರಿ ಸೆಕ್ಷನ್‌ಗಳನ್ನು ಹಾಕಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

Leave a Reply