ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ ಬ್ಲ್ಯಾಕ್ ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ ಐಆರ್ ದಾಖಲಿಸುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪೊಲೀಸರಿಗೆ ಸೂಚಿಸಿದ್ದಾರೆ.
ಅನುಮತಿ ಇಲ್ಲದೆ, ಖಾಸಗಿ ಫೋಟೋಗಳು ಹಾಗೂ ವಿಡಿಯೋಗಳನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಅಥವಾ ಪ್ರಸಾರ ಮಾಡುವ ಪ್ರಕರಣಗಳಲ್ಲಿ ಮುಲಾಜಿಲ್ಲದೆ ಕಾನೂನು ಕ್ರಮಕೈಗೊಳ್ಳಬೇಕು. ಇಂತಹ ಪ್ರಕರಣಗಳು ಸಂಜ್ಞೆಯ ಅಪರಾಧವಾಗಿದ್ದು, ಸಾಮಾನ್ಯವಾಗಿ “ರಿವೆಂಜ್ ಪೋರ್ನೋಗ್ರಫಿ’, ‘ಸೆಕ್ಸ್ ಟಾರ್ಷನ್’ ಹಾಗೂ “ಬ್ಲ್ಯಾಕ್ ಮೇಲ್ ವಿಡಿಯೋ’ ಎಂದು ಕರೆಯಲ್ಪಡುವ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್‌ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಇಂತಹ ಪ್ರಕರಣಗಳಲ್ಲಿ ಅನ್ವಯವಾಗುವಂತೆ ಬಿಎನ್ ಎಸ್ ಸೆಕ್ಷನ್ 77 ಹಾಗೂ ಐಟಿ ಕಾಯ್ದೆ ಸೆಕ್ಷನ್ 662, 67 ಮತ್ತು 67ಎ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಈ ಸ್ಥಾಯಿ ಆದೇಶವು, ವಿಡಿಯೋ ಅಥವಾ ಫೋಟೋ ದಾಖಲಿಸಲು ಹಿಂದೆ ಒಪ್ಪಿಗೆ ನೀಡಲಾಗಿತ್ತು ಎಂಬ ಕಾರಣವನ್ನು ಉಲ್ಲೇಖಿಸಿ ದೂರು ದಾಖಲಿಸಲು ನಿರಾಕರಿಸುವುದು ಅಥವಾ ವಿಳಂಬ ಮಾಡುವುದು ಮಾಡಬಾರದು ಎಂದು ತಿಳಿಸಿದೆ. ಬೆದರಿಕೆ, ಸುಲಿಗೆ, ಲೈಂಗಿಕ ಅನುಕೂಲತೆಗಳ ಬೇಡಿಕೆ ಅಥವಾ ಇತರೆ ಒತ್ತಡದ ಸಂದರ್ಭಗಳಲ್ಲಿ ಸುಲಿಗೆ ಮತ್ತು ಕ್ರಿಮಿನಲ್ ಬೆದರಿಕೆಗಳಿಗೆ ಸಂಬಂಧಿಸಿದ ಹೆಚ್ಚುವರಿ ಸೆಕ್ಷನ್‌ಗಳನ್ನು ಹಾಕಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …