ಬೆಂಗಳೂರು, : ಓರ್ವ ಅತ್ಯಾಚಾರ ಆರೋಪಿ ಸರ್ಕಾರ ಉರುಳಿಸುವ ಬೆದರಿಕೆಗಳನ್ನು ಹಾಕಿಕೊಂಡು ರಾಜಾರೋಷವಾಗಿ ತಿರುಗುತ್ತಿರುವುದು ಬಹುಶಃ ಇದೇ ಮೊದಲೇನೋ ಎಂದು ಹೇಳಿರುವ ಕಾಂಗ್ರೆಸ್, ಅಶ್ಲೀಲ ಸಿಡಿ ಪ್ರಕರಣದಲ್ಲಿ ಕೂಡಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದೆ.
ಸಿಡಿಯಲ್ಲಿರುವ ಯುವತಿ ಶುಕ್ರವಾರ ಲಿಖಿತ ದೂರು ನೀಡಿದ್ದಾಳೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಮೇಶ್ ಜಾರಕಿಹೊಳಿ, “ಮೈತ್ರಿ ಸರ್ಕಾರವನ್ನೇ ಉರುಳಿಸಿದ್ದೇವೆ, ಇನ್ನು ಇದ್ಯಾವ ಲೆಕ್ಕ. ನಮ್ಮ ಆಟ ಇನ್ನು ಪ್ರಾರಂಭವಾಗಲಿದೆ. ಶೀಘ್ರದಲ್ಲೇ ಈ ಸಿಡಿ ಹಿಂದಿನ ಮಹಾನಾಯಕನನ್ನು ಬಹಿರಂಗಪಡಿಸುವ ಮೂಲಕ ಬಾಂಬ್ ಸಿಡಿಸಲಿದ್ದೇನೆ” ಎಂದು ಹೇಳಿದ್ದರು.
ಇದನ್ನೂ ಓದಿ :ಉಡುಪಿ :ಕನ್ನಡ ಬಳಕೆ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ”ಅತ್ಯಾಚಾರ ಆರೋಪಿ ಸರ್ಕಾರವನ್ನೇ ಉರುಳಿಸಿಬಿಡಬಲ್ಲೆ, ಬಾಂಬ್ ಹಾಕುತ್ತೇನೆ, ಮತ್ತೊಂದು ಮಾಡುತ್ತೇನೆ ಎನ್ನುವ ಬೆದರಿಕೆ ಹಾಕುತ್ತಾ ರಾಜಾರೋಷವಾಗಿ ತಿರುಗುತ್ತಿರುವುದು ಬಹುಶಃ ಇದೇ ಮೊದಲೇನೋ” ಎಂದು ಹೇಳಿದೆ. ”ಕೂಡಲೇ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕು” ಎಂದು ಆಗ್ರಹಿಸಿರುವ ಕಾಂಗ್ರೆಸ್, ”ಪ್ರಕರಣ ಪ್ರಭಾವಕ್ಕೆ ಒಳಗಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ” ಎಂದು ಹೇಳಿದೆ.
ಇದನ್ನೂ ಓದಿ :ಹೆಜಮಾಡಿ: ಟೋಲ್ ಗೇಟಿನಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯತಿ: ನವಯುಗ ಕಂಪನಿಗೆ ಮನವಿ -Vishwanews24
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…