ದೇಶದ ಅಸಂಘಟಿತ ವಲಯಗಳಲ್ಲಿ ಸುಮಾರು 43.7 ಕೋಟಿ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಮಾಹಿತಿ ಹಾಗೂ ಸಂಘಟನೆಯ ಕೊರತೆಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ದೊರೆಯಬಹುದಾದ ಹಲವು ಯೋಜನೆ, ಸೌಲಭ್ಯಗಳಿಂದ ಈ ಕಾರ್ಮಿಕರು ವಂಚಿತರಾಗುತ್ತಿದ್ದಾರೆ, ಈ ಎಲ್ಲಾ ಕಾರ್ಮಿಕರನ್ನು ಒಂದೇ ಕಡೆಯಲ್ಲಿ ನೊಂದಣಿ ಮಾಡಲು ಆಗಸ್ಟ್ 26 ರಿಂದ ಕೇಂದ್ರ ಸರ್ಕಾರದ ಇ-ಶ್ರಮ್ ನೊಂದಣಿ ಏಕಕಾಲದಲ್ಲಿ ದೇಶಾದ್ಯಂತ ಆರಂಭವಾಗುತ್ತಿದೆ.
ಇ-ಶ್ರಮ್ ನೊಂದಣಿ ಮೂಲಕ ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್ (ಓಆUW) ಅನ್ನು ರಚಿಸುತ್ತಿದೆ. ಅಸಂಘಟಿತ ಕಾರ್ಮಿಕರ ನೋಂದಣಿಗೆ ಈ ವೆಬ್‌ಸೈಟ್‌ನಲ್ಲಿ ಅನುಕೂಲ ಕಲ್ಪಿಸಲಾಗುವುದು ಹಾಗೂ ಪ್ರತಿ ಅಸಂಘಟಿತ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಲಾಗುವುದು, ಇದು ಅನನ್ಯ ಗುರುತಿನ ಸಂಖ್ಯೆಯಾಗಿರುತ್ತದೆ.
ನೊಂದಣಿಯಿAದ ಅಸಂಘಟಿತ ಕೆಲಸಗಾರರಿಗೆ ಪ್ರಯೋಜನಗಳು: ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸï ಆಧಾರದ ಮೇಲೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಚಿವಾಲಯಗಳು/ಸರ್ಕಾರಗಳು ಜಾರಿಗೊಳಿಸುತ್ತವೆ. ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸï ಅಡಿಯಲ್ಲಿ ನೋಂದಾಯಿತ ಕೆಲಸಗಾರರು ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯನ್ನು ತೆಗೆದುಕೊಳ್ಳಬಹುದು. ಇದರ ಪ್ರೀಮಿಯಂ ರೂ. 12 ಅನ್ನು 1 ವರ್ಷದವರೆಗೆ ಮನ್ನಾ ಮಾಡಲಾಗುತ್ತದೆ.
ಅಸಂಘಟಿತ ಕಾರ್ಮಿಕರ ವಲಯದಲ್ಲಿ, ಸಣ್ಣ ಮತ್ತು ಕನಿಷ್ಠ ರೈತರು, ಕೃಷಿ ಕಾರ್ಮಿಕರು, ಹಂಚಿಕೆದಾರರು, ಮೀನುಗಾರರು, ಪಶು ಸಂಗೋಪನೆಯಲ್ಲಿ ತೊಡಗಿರುವವರು, ಬೀಡಿ ಕಟ್ಟುವವರು, ಐಚಿbeಟಟiಟಿg ಚಿಟಿಜ ಠಿಚಿಛಿಞiಟಿg ,ಕಟ್ಟಡ ಕಾರ್ಮಿಕರು ,ಚರ್ಮದ ಕೆಲಸಗಾರರು, ನೇಕಾರರು, ಬಡಗಿ, ಉಪ್ಪು ಕೆಲಸಗಾರರು, ಇಟ್ಟಿಗೆ ಗೂಡು ಮತ್ತು ಕಲ್ಲಿನ ಕೆಲಸಗಾರರು, ಕ್ವಾರಿಗಳಲ್ಲಿನ ಕಾರ್ಮಿಕರು, ಸಾಮಿಲ್ ಕೆಲಸಗಾರರು, ಗೃಹ ಕಾರ್ಮಿಕರು, ಕ್ಷೌರಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಪತ್ರಿಕೆ ಮಾರಾಟಗಾರರು, ರಿಕ್ಷಾಎಳೆಯುವವರು, ಆಟೋ ಚಾಲಕರು, ರೇಷ್ಮೆ ಕೃಷಿ ಕಾರ್ಮಿಕರು, ಬಡಗಿಗಳು, ಟ್ಯಾನರಿ ಕೆಲಸಗಾರರು, ಗೃಹ ಸೇವಕರು, ಬೀದಿ ಬದಿ ವ್ಯಾಪಾರಿಗಳು, Labelling and packing, ಹಾಲು ಹಾಕುವ ರೈತರು, ವಲಸೆ ಕಾರ್ಮಿಕರು ಸೇರುತ್ತಾರೆ.
ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್ ನಲ್ಲಿ ನೊಂದಣಿಯಾಗಲು, ಮೇಲಿನ ಅಸಂಘಟಿತ ಕಾರ್ಮಿಕ ವರ್ಗಗಳಲ್ಲಿ ಕೆಲಸ ಮಾಡುತ್ತಿದ್ದು, ವಯಸ್ಸು 16-59 ವರ್ಷಗಳು ಆಗಿರಬೇಕು, ಆದಾಯ ತೆರಿಗೆ ಪಾವತಿಸುವವರಾಗಿರಬಾರದು. ಇPಈಔ ಮತ್ತು ಇSIಅ ಸದಸ್ಯರಾಗಿರಬಾರದು,
ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸï ನಲ್ಲಿ, ಸಂಘಟಿತ ವಲಯದಲ್ಲಿ ತೊಡಗಿರುವವರು ನೊಂದಣಿಯಾಗಲು ಸಾಧ್ಯವಿಲ್ಲ. ಏಕೆಂದರೆ ಸಂಘಟಿತ ವಲಯವು ಖಾಸಗಿ ಅಥವಾ ಸಾರ್ವಜನಿಕ ವಲಯದ ಕೆಲಸಗಾರರನ್ನು ಒಳಗೊಂಡಿರುತ್ತದೆ, ಅವರು ನಿಯಮಿತ ವೇತನಗಳು, ಭತ್ಯೆಗಳು ಮತ್ತು ಇತರ ಪ್ರಯೋಜನಗಳನ್ನು ಹಾಗೂ ರಜೆಗಳ ಮತ್ತು ಸಾಮಾಜಿಕ ಭದ್ರತೆ ಸೇರಿದಂತೆ ಭವಿಷ್ಯ ನಿಧಿ ಮತ್ತು ಗ್ರಾಚ್ಯುಟಿ ಯನ್ನು ಪಡೆಯುತ್ತಾರೆ.
ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸï ನಲ್ಲಿ ನೊಂದಣಿಯಾಗಲು ಕಾರ್ಮಿಕರು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ , ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಮತ್ತು ಮೊಬೈಲ್ ನೊಂದಿಗೆ ತಮ್ಮ ಸಮೀಪದ ಯಾವುದೇ ಸಾಮಾನ್ಯ ಸೇವಾ ಕೇಂದ್ರದಲ್ಲಿ ನೊಂದಣಿ ಮಾಡಿಕೊಳ್ಳಬಹುದು, ನೊಂದಣಿ ಮಾಡಿಕೊಂಡ ಕಾರ್ಮಿಕರಿಗೆ ಎ4 ಅಳತೆಯ ನೊಂದಣಿ ಪತ್ರ ನೀಡಲಾಗುವುದು.
ಉಡುಪಿ ಜಿಲ್ಲೆಯಲ್ಲಿ ಸುಮಾರು 15000 ಕ್ಕೂ ಅಧಿಕ ಅಸಂಘಟಿತ ಕಾರ್ಮಿಕರಿದ್ದು, ಈ ಕಾರ್ಮಿಕರು ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸï ನಲ್ಲಿ ನೊಂದಣಿಯಾಗುವ ಮೂಲಕ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಸಂಘಟಿತ ಕಾರ್ಮಿಕರಿಗೆ ನೀಡುವ ಹಲವು ಸೌಲಭ್ಯಗಳನ್ನು ಪಡೆಯಬಹುದು. ಜಿಲ್ಲೆಯಲ್ಲಿ 160 ಕ್ಕೂ ಅಧಿಕ ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಜಿಲ್ಲೆಯಲ್ಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸಮೀಪದ ಸೇವಾ ಕೇಂದ್ರಗಳಲ್ಲಿ ನೊಂದಣಿ ಮಾಡಿಕೊಂಡು, ಯೋಜನೆಯ ಪ್ರಯೋಜನ ಪಡೆಯಬೇಕು ಎನ್ನುತ್ತಾರೆ ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್..
ಉಡುಪಿ: ನಾಗ ಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ಡೆಕ್ಕೆ ಬಲಿ ಸೇವೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದ ನಟಿ ಪೂಜಾ ಹೆಗ್ಡೆ…
ಕೌಟುಂಬಿಕ ಕಲಹ : ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಸಬ್ ಇನ್ಸ್‌ಪೆಕ್ಟರ್ …
ದಕ್ಷಿಣ ಕನ್ನಡ : ಕರಾವಳಿಯಲ್ಲಿ ಏರುತ್ತಿರುವ ತಾಪಮಾನ; ಬಿಸಿಲಾಘಾತದ ಆತಂಕ ದಕ್ಷಿಣ ಕನ್ನಡ : ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲ…
ಉಡುಪಿ: ಕರ್ನಾಟಕ ಲಲಿತಕಲಾ ಅಕಾಡೆಮಿಯ ವರ್ಣಶ್ರೀ ಪ್ರಶಸ್ತಿಗೆ ಉಡುಪಿಯ ಪುಸಿದ್ಧ ಛಾಯಾಗ್ರಾಹಕ ಫೋಕಸ್ ರಾಘು ಆಯ್ಕೆ ಉಡುಪಿ: ಕರ್ನಾಟಕ ಲಲಿತಕಲಾ…
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…