ಅಸಾನಿ ಚಂಡಮಾರುತ : ಕರ್ನಾಟಕದಲ್ಲಿ ಎರಡು ದಿನಗಳ ಕಾಲ ಮಳೆ ; ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ – Vishwnaews24
ಅಸಾನಿ ಚಂಡಮಾರುತ ಹಿನ್ನೆಲೆ : ಕರ್ನಾಟಕದಲ್ಲಿ ಎರಡು ದಿನಗಳ ಕಾಲ ಮಳೆ ; ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ – Vishwnaews24
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಅಸಾನಿ ಚಂಡಮಾರುತ ಹಿನ್ನೆಲೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಕರಾವಳಿಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ.
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ಮೈಸೂರು, ಮಂಡ್ಯ, ಹಾಸನ, ತುಮಕೂರು, ರಾಮನಗರ, ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ.
