ದೆಹಲಿ: ಅಸ್ಸಾಂನಲ್ಲಿ ಪ್ರವಾಹದಿಂದ ಲಕ್ಷಾಂತರ ಜನರು ಸಂಕಷ್ಟದಲ್ಲಿದ್ದು, ಭಾರತದ ಓಟಗಾರ್ತಿ ಹಿಮಾದಾಸ್ ಅವರು ತಮ್ಮ ವೇತನದ ಅರ್ಧದಷ್ಟು ಭಾಗವನ್ನು ಪ್ರವಾಹಪೀಡಿತರಿಗೆ ನೆರವಿಗೆ ನೀಡಿದ್ದಾರೆ.
ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳ ಪ್ರವಾಹದಿಂದ ಮನೆಗಳು, ದೇವಾಲಗಳು ಹಾಗೂ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ.
ನನ್ನ ರಾಜ್ಯದ 33 ಜಿಲ್ಲೆಗಳಲ್ಲಿ 30 ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಜನರ ಪರಿಸ್ಥಿತಿ ಹೇಳಲಾರದ ಸ್ಥಿತಿ ತಲುಪಿದೆ. ನಾನು ಕೈಲಾದಷ್ಟು ಸಹಾಯ ಮಾಡಿದ್ದೇನೆ. ದಯವಿಟ್ಟು ನೀವು ಸಹಾಯ ಮಾಡಿ ಸಂತ್ರಸ್ತರಿಗೆ ನೆರವಾಗಿ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಸದ್ಯ ಇಂಡಿಯನ್ ಆಯಿಲ್ ಕಾರ್ಪೊರೇಷನ್ನಲ್ಲಿ ಕೆಲಸ ನಿರ್ವಹಿಸುತ್ತಿರುವ ಹಿಮಾ ದಾಸ್ ತಮ್ಮ ವೇತನದ ಅರ್ಧ ಭಾಗವನ್ನು ನೀಡುವ ಮೂಲಕ ದೇಶದ ನಾಗರೀಕರನ್ನು ನೆರೆ ಸಂತ್ರಸ್ತರಿಗೆ ನೆರವಾಗುವಂತೆ ಮನವಿ ಮಾಡಿಕೊಂಡಿದ್ದಾರೆ.
ಪ್ರವಾಹದಿಂದ ಇಲ್ಲಿಯವರೆಗೂ 17ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 47 ಲಕ್ಕ್ಕೂ ಅಧಿಕ ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ. ಇನ್ನು 4175 ಹಳ್ಳಿಗಳು ಮತ್ತು 90,000 ಕೃಷಿ ಭೂಮಿ ನೀರಿನಲ್ಲಿ ಮುಳುಗಡೆಯಾಗಿದೆ. ಅಲ್ಲದೇ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಶೇಕಡ 90 ರಷ್ಟು ಮುಳುಗಡೆಯಾಗಿದ್ದು, 10 ಲಕ್ಷಕ್ಕೂ ಅಧಿಕ ಪ್ರಾಣಿ ಸಂಕುಲ ನಶಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…